ತುಮಕೂರು:- ಮಹಾಮಾರಿ ಡೆಂಘಿಗೆ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಪಾವಗಡ ಪಟ್ಟಣದ ಬಾಬೈಯನ ಗುಡಿಬೀದಿಯಲ್ಲಿ ಜರುಗಿದೆ. ಕರುಣಾಕರ್(7) ಮೃತ ಬಾಲಕ.
Advertisement
ಪಾವಗಡದ ಸುಧಾ ಕ್ಲಿನಿಕ್ನಲ್ಲಿ ಬಾಲಕ ಕಳೆದ 8 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೊನೆ ಕ್ಷಣದವರೆಗೂ ಡೆಂಘಿ ಜ್ವರ ಎಂದು ವೈದ್ಯರು ಪೋಷಕರಿಗೆ ತಿಳಿಸಿಲ್ಲ.
ಹೀಗಾಗಿ ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಧಾ ಕ್ಲಿನಿಕ್ ಮುಂದೆ ಪ್ರತಿಭಟನೆ ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.