ಹುಬ್ಬಳ್ಳಿ:- ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ದೆಹಲಿ ಚುನಾವಣಾ ಫಲಿತಾಂಶದ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ.
ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಕೇಜ್ರಿವಾಲ್ ಅಧಿಕಾರದ ಗದ್ದುಗೆ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ ಜನ ಬಿಜೆಪಿ ಕೈ ಹಿಡಿದಿದ್ದಾರೆ ಎಂದರು.
ಕಾಂಗ್ರೆಸ್ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದೆ. ಅದು ನಮ್ಮ ತಪ್ಪಿನಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ ಎಂದು ಕಿಡಿಕಾರಿದರು.