ʻಏರೋ ಇಂಡಿಯಾ 2025ʼಕ್ಕೆ ಚಾಲನೆ: ಇದು ಮತ್ತೊಂದು ಕುಂಭಮೇಳ ಎಂದ ರಕ್ಷಣಾ ಸಚಿವ!

0
Spread the love

ಬೆಂಗಳೂರು:- 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼಕ್ಕೆ ಬೆಂಗಳೂರಿನಲ್ಲಿ ಅದ್ದೂರಿ ಚಾಲನೆ ಸಿಕ್ಕಿದೆ.

Advertisement

ಯಲಹಂಕ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಚಾಲನೆ ನೀಡಿದ್ದಾರೆ. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು, ಏರ್‌ ಶೋ ಮೂಲಕ ಮತ್ತೊಂದು ಕುಂಭ ಶುರುವಾದಂತಿದೆ. ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳ ಸಂಸ್ಕೃತಿ ಬಗ್ಗೆ ತೋರಿಸಿದ್ರೆ, ಏರ್‌ ಶೋ ಭಾರತದ ರಕ್ಷಣಾ ಬಲಿಷ್ಠತೆಯನ್ನ ಜಗತ್ತಿಗೆ ಸಾರುತ್ತಿದೆ. ಅಲ್ಲದೇ ಅಭಿವೃದ್ಧಿ, ಉತ್ಪಾದನೆಯ ಬಗ್ಗೆ ಭಾರತ ಕೇಂದ್ರೀಕೃತವಾಗಿದೆ. ಏರ್ ಶೋ ರಾಷ್ಟ್ರ-ರಾಷ್ಟ್ರಗಳ ಮಧ್ಯೆ ಸಂಬಂಧ – ಬಾಂಧವ್ಯಗಳನ್ನ ಅಭಿವೃದ್ಧಿಗೊಳಿಸುತ್ತದೆ ಎಂದು ನುಡಿದರು.

ದೇಶ-ವಿದೇಶಗಳ ವಾಯುಪಡೆಯ ಅಧಿಕಾರಿಗಳು ಇಲ್ಲಿದ್ದಾರೆ. ಭಾರತದ ಜೊತೆ ಈ ಅಧಿಕಾರಿಗಳ ಸಹಭಾಗಿತ್ವ ಮುಖ್ಯವಾಗಿದೆ. ಈ ಸಂಬಂಧ ವೃದ್ಧಿಯಾದ್ರೆ ಜಗತ್ತಿನಲ್ಲಿ ಬಲಿಷ್ಠರಾಗುತ್ತೇವೆ. ಡಿಜಿಟಲ್, ಸ್ಟಾರ್ಟ್ ಆಪ್, ಕೈಗಾರಿಕೋದ್ಯಮ, ನವೋಧ್ಯಮದಲ್ಲಿ ಭಾರತ ಪ್ರಗತಿ ಹೊಂದುತ್ತಿದೆ. ಅದರಂತೆ ರಕ್ಷಣಾ ವಲಯ ಬಲಿಷ್ಠವಾಗುತ್ತಿದೆ ಎಂದು ಶ್ಲಾಘಿಸಿದರು.

ಇದೇ ವೇಳೆ ಬೆಂಗಳೂರಿನ ಹೆಚ್‌ಎಎಲ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜನಾಥ್‌ ಸಿಂಗ್‌, ಗುಜರಾತ್ ನಲ್ಲಿ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದ ಉತ್ಪಾದನಾ ಘಟಕ ಆರಂಭವಾಗಿದೆ. ಬೆಂಗಳೂರನ್ನ ಸಿಲಿಕಾನ್ ವ್ಯಾಲಿ ಎನ್ನಬಹುದು. ಯುದ್ಧ ವಿಮಾನಗಳು, ಡ್ರೋನ್ಸ್, ರಡಾರ್ ಸೇರಿ ರಕ್ಷಣಾ ಉತ್ಪಾದನೆಯಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ. 400ಕ್ಕೂ ಹೆಚ್ಚು ದೇಶಿಯ ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟ ಖಾಸಗಿ ಕಂಪನಿಗಳು ಪ್ರದರ್ಶಕರು ಭಾಗಿಯಾಗಿದ್ದಾರೆ. ಮುಂದಿನ 2 ವರ್ಷಗಳಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲಿದ್ದೇವೆ. ಡಿಫೆನ್ಸ್ ರಪ್ತು 21,000 ಕೋಟಿಗೂ ಹೆಚ್ಚಾಗಿದೆ. ಅಲ್ಲದೇ ಮುಂದುವರೆದ ರಾಷ್ಟ್ರಗಳಲ್ಲಿ ರಕ್ಷಣಾ ಉತ್ಪನ್ನಗಳ ಪಾಲುದಾರಿಕೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಶ್ಲಾಘಿಸಿದ್ರು.

ಕಾರ್ಯಕ್ರಮದಲ್ಲಿ ದೇಶ – ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋನಲ್ಲಿ ಭಾಗಿಯಾಗಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್‌ ಸಹ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here