ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸರಕಾರದಿಂದ ಹಂತಹಂತವಾಗಿ ಅನುದಾನ ಮಂಜೂರಿ ಮಾಡಿದರೆ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಅಭಿವೃದ್ಧಿಪಡಿಸಲಾಗುವದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಅವರು ತಾಲೂಕಿನ ಹರದಗಟ್ಟಿ ತಾಂಡಾದ ಪರಿಶಿಷ್ಟ ಕಾಲೋನಿಯಲ್ಲಿ 2024-25ನೇ ಸಾಲಿನ ಪ್ರಗತಿ ಕಾಲೋನಿ ಯೋಜನೆಯಡಿಯಲ್ಲಿ ಅಂದಾಜು 50 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದರು.
ಹರದಗಟ್ಟಿ ಗ್ರಾಮದ ಅಭಿವೃದ್ಧಿ ಕಾಮಗಾರಿಗಳಿಗೆ ಬೇಡಿಕೆ ಇದ್ದು, ಗ್ರಾಮದ ಜನರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವದು. ಸರಕಾರದಿಂದ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇನೆ. ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದಲ್ಲಿ ನಿರ್ಮಿಸಬೇಕು, ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆದರಹಳ್ಳಿ ಗವಿಮಠದ ಮಹಾತಪಸ್ವಿ ಡಾ.ಕುಮಾರ ಮಹಾರಾಜರು, ಅಡರಕಟ್ಟಿ ಗ್ರಾ.ಪಂ ಅಧ್ಯಕ್ಷೆ ಪ್ರೇಮವ್ವ ನಾಯಕ, ಥಾವರಪ್ಪ ಲಮಾಣಿ, ದೇವಪ್ಪ ಲಮಾಣಿ, ಸೋಮು ಲಮಾಣಿ, ಚಂದ್ರಕಾಂತ ಲಮಾಣಿ, ಶಿವು ನಾಯಕ, ಮಾನಪ್ಪ ನಾಯಕ, ಶಂಕರ ಕಾರಬಾರಿ, ಸುರೇಶ ಲಮಾಣಿ, ಗೋವಿಂದಪ್ಪ ತಳವಾರ, ಅಶೋಕ ಚವಾಣ್, ರಮೇಶ ಲಮಾಣಿ, ಸಂತೋಷ ಪೂಜಾರ, ರವಿ ಲಮಾಣಿ, ಗ್ರಾ.ಪಂ ಸದಸ್ಯರು, ಗ್ರಾಮಸ್ಥರು ಇದ್ದರು.