ಬೆಂಗಳೂರು: ಜನರ ಪೂರ್ತಿ ತಲೆ ಬೋಳಿಸಿದ್ದೀರಿ. ಇನ್ನೇನು ಬೋಳಿಸಲು ಹೊರಟಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಮಾತನಾಡಿದ ಅವರು,
Advertisement
ಬಸ್ ಪ್ರಯಾಣದರ, ಮೆಟ್ರೋ ಪ್ರಯಾಣದರ ಹೆಚ್ಚಳವನ್ನೂ ಅವರು ಖಂಡಿಸಿದರು. ರಾಜ್ಯ ಸರ್ಕಾರ ಬರಿ ಸುಳ್ಳು ಹೇಳುತ್ತಿದೆ. ಜನರ ಪೂರ್ತಿ ತಲೆ ಬೋಳಿಸಿದ್ದೀರಿ. ಇನ್ನೇನು ಬೋಳಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಒಂದು ಕಾಸಿನ ಅಭಿವೃದ್ಧಿ ಇಲ್ಲ, ಅಭಿವೃದ್ಧಿಗೆ ಹಣವೂ ಇಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಇಡೀ ರಾಜ್ಯದ ಲೂಟಿ ಮಾಡುತ್ತಿರುವಂತಿದೆ. ಎಲ್ಲದರ ಬೆಲೆ ಏರಿಸುತ್ತಿದ್ದಾರೆ. ಇಷ್ಟಾದರೂ ಅವರ ದರಿದ್ರ ತಪ್ಪಿಲ್ಲ. ಇದೊಂದು ದರಿದ್ರ ಸರ್ಕಾರ ಎಂದು ಜನರೇ ಹೇಳುತ್ತಿದ್ದಾರೆ ಎಂದು ದೂರಿದರು.