ಆರ್‌ಎಮ್‌ಎಸ್‌ಎಸ್ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ ಬೆಂಗಳೂರು ಇದರ ವತಿಯಿಂದ ಡಿಸೆಂಬರ್-ಜನವರಿ 2024-25ನೇ ಸಾಲಿನಲ್ಲಿ ನಡೆದ ತೃತೀಯ ವರ್ಷದ ಬಿಎಸ್‌ಸಿ ನರ್ಸಿಂಗ್ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಇದರಲ್ಲಿ ಆರ್‌ಎಮ್‌ಎಸ್‌ಎಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದಿದ್ದಾರೆ.

Advertisement

ತೃತೀಯ ವರ್ಷದ ವಿದ್ಯಾರ್ಥಿನಿಯರಾದ ರಮ್ಯ ಹಿರೇಮಠ 594(84.57%) ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ, ದೀಪಾ ಜಿ 592(84.57%) ದ್ವಿತೀಯ ಸ್ಥಾನ, ಮಾಹೇಕ್ ಧಾರವಾಡ 582(83.14%) ತೃತೀಯ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ. ಒಟ್ಟು 36 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಇನ್ನುಳಿದ 7 ವಿದ್ಯಾರ್ಥಿಗಳು ಉತ್ತಮ ಫಲಿತಾಂಶದ ಮೂಲಕ ಒಟ್ಟು ಶೇ. 83.33ರಷ್ಟು ಫಲಿತಾಂಶ ಪಡೆದು ತೇರ್ಗಡೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಬಸಯ್ಯ ಹಿರೇಮಠ ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಶಿಕ್ಷಣ ಸಂಸ್ಥೆಯ ಗೌರವವನ್ನು ಹೆಚ್ಚಿಸಿದ್ದಾರೆ. ಆರ್‌ಎಮ್‌ಎಸ್‌ಎಸ್ ನರ್ಸಿಂಗ್ ಸೈನ್ಸ್ ಕಾಲೇಜಿನ ರೂವಾರಿ, ಸಚಿವ ಡಾ. ಹೆಚ್.ಕೆ. ಪಾಟೀಲ್, ಅಧ್ಯಕ್ಷರಾದ ಡಾ. ಎಸ್.ಆರ್. ನಾಗನೂರ, ಗೌರವ ಕಾರ್ಯದರ್ಶಿ ಡಾ. ವೇಮನ್ ಸಾವಕಾರ ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here