ಬೆಂಗಳೂರು:- ನಗರದ ಕಾಡುಬೀಸನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ವಿಷ ಸೇವಿಸಿ ಒಡಿಶಾದ ಖ್ಯಾತ ರ‍್ಯಾಪರ್ ಸೂಸೈಡ್ ಮಾಡಿಕೊಂಡಿದ್ದಾರೆ.
ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ರ‍್ಯಾಪರ್. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಒಡಿಶಾ ಮೂಲದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್, ಬೆಂಗಳೂರಿನ ಕಾಡುಬೀಸನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಆದ್ರೆ, ಏನಾಗಿತ್ತೋ ಏನೋ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತ್ನಿ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಅಭಿನವ್ ಸಿಂಗ್ ಅವರ ಕುಟುಂಬಸ್ಥರು ಆರೋಪಿಸಿದ್ದು, ಈ ಸಂಬಂಧ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಾಗಳಲ್ಲಿ ತನಿಖೆ ನಡೆಸಿದ್ದಾರೆ.



