HomeSports News3ನೇ ಏಕದಿನ ಸರಣಿ: ಇಂಗ್ಲೆಂಡ್ ವಿರುದ್ಧ ಗೆದ್ದ ಟೀಮ್ ಇಂಡಿಯಾ; ಸರಣಿ ಕ್ಲೀನ್‌ ಸ್ವೀಪ್ ಮಾಡಿದ...

3ನೇ ಏಕದಿನ ಸರಣಿ: ಇಂಗ್ಲೆಂಡ್ ವಿರುದ್ಧ ಗೆದ್ದ ಟೀಮ್ ಇಂಡಿಯಾ; ಸರಣಿ ಕ್ಲೀನ್‌ ಸ್ವೀಪ್ ಮಾಡಿದ ರೋಹಿತ್ ಪಡೆ!

For Dai;y Updates Join Our whatsapp Group

Spread the love

ಇಂಗ್ಲೆಂಡ್‌ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 142 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟೀಂ ಇಂಡಿಯಾದ ಅದ್ಭುತ ಆಲ್‌ರೌಂಡ್ ಪ್ರದರ್ಶನದಿಂದಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ವೈಟ್‌ವಾಶ್ ಮಾಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 356 ರನ್‌ ಪೇರಿಸಿತ್ತು. 357 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿತು. 34.2 ಓವರ್‌ಗಳಲ್ಲೇ 214 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು.

ಬೃಹತ್‌ ರನ್‌ ಟಾರ್ಗೆಟ್‌ ಬೆನ್ನತ್ತಿದ್ದ ಇಂಗ್ಲೆಂಡ್‌ ತಂಡಕ್ಕೆ ಭಾರತೀಯ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಇದರ ಹೊರತಾಗಿಯೂ ಇಂಗ್ಲೆಂಡ್‌ ಒಂದೆಡೆ ರನ್‌ ಗಳಿಸುತ್ತಿದ್ದರೆ, ಮತ್ತೊಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಮಧ್ಯಮ ಕ್ರಮಾಂಕದಲ್ಲಿ ಬಟ್ಲರ್‌, ಲಿವಿಂಗ್‌ಸ್ಟೋನ್‌, ರೂಟ್‌ ಹಾಗೂ ಹ್ಯಾರಿ ಬ್ರೂಕ್‌ ಅವರ ಬ್ಯಾಟಿಂಗ್‌ ವೈಫಲ್ಯ ಇಂಗ್ಲೆಂಡ್‌ಗೆ ದೊಡ್ಡ ಪೆಟ್ಟು ನೀಡಿತು. ಪರಿಣಾಮ 214 ರನ್‌ಗಳಿಗೆ ಆಲೌಟ್‌ ಆಯಿತು.

ಇಂಗ್ಲೆಂಡ್‌ ಪರ ಟಾಮ್‌ ಬ್ಯಾನ್‌ಟನ್‌, ಗಸ್‌ ಅಟ್ಕಿನ್‌ಸನ್‌ ತಲಾ 38 ರನ್‌ ಗಳಿಸಿದ್ರೆ, ಬೆನ್‌ ಡಕೆಟ್‌ 34 ರನ್‌, ಜೋ ರೂಟ್‌ 24 ರನ್‌, ಫಿಲ್‌ ಸಾಲ್ಟ್‌ 23 ರನ್‌, ಬ್ರೂಕ್‌ 19 ರನ್‌ ಗಳಿಸಿದ್ರೆ ಉಳಿದವರು ಒಂದಂಕಿ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಭರ್ಜರಿ ಮೊತ್ತವನ್ನೇ ಪೇರಿಸಿತು. ಉಪನಾಯಕ ಶುಭಮನ್ ಗಿಲ್ ಅಮೋಘ ಶತಕ ಸಿಡಿಸುವ ಮೂಲಕ ತಂಡಕ್ಕೆ ಅಡಿಪಾಯ ಹಾಕಿದರು. ಇನ್ನೂ ಆರಂಭಿಕ ರೋಹಿತ್‌ ಒಂದೇ ರನ್ನಿಗೆ ಔಟಾಗುತ್ತಿದ್ದಂತೆ ಅಖಾಡಕ್ಕಿಳಿದ ಕೊಹ್ಲಿ ಬಹುದಿನಗಳ ಬಳಿಕ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಇದರೊಂದಿಗೆ ಶ್ರೇಯಸ್‌ ಅಯ್ಯರ್‌ ಅವರ ಭರ್ಜರಿ ಬ್ಯಾಟಿಂಗ್‌ ಟೀಂ ಇಂಡಿಯಾ ಬೃಹತ್‌ ಮೊತ್ತ ಪೇರಿಸಲು ಕಾರಣವಾಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!