ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ದರ ಇಳಿಕೆಗೆ ಸಿಎಂ ಸೂಚನೆ!

0
Spread the love

ಬೆಂಗಳೂರು:- ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಟಿಕೆಟ್ ದರ ಇಳಿಕೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ದರ ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Advertisement

ಈ ಬಗ್ಗೆ ಸಿಎಂ ಸಿದ್ದರಾಮಯ್ಯ X ನಲ್ಲಿ ಮಾಹಿತಿ ನೀಡಿದ್ದು, ಮೆಟ್ರೋ ಟಿಕೆಟ್ ದರ ಇಳಿಕೆ ಮಾಡುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ಸಿದ್ದರಾಮಯ್ಯ ಮಾಡಿರುವ X ನಲ್ಲಿ ಏನಿದೆ?

ಬಿಎಂಆರ್‌ಸಿಎಲ್ ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದರು.


Spread the love

LEAVE A REPLY

Please enter your comment!
Please enter your name here