ಬೆಂಗಳೂರು: ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಹತ್ತು ಆರೋಪಿಗಳ ಬಂಧನ ಆಗಿದೆ. ಸಿಸಿಟಿವಿಯಲ್ಲಿ ಪರಿಶೀಲಿಸಿ ಕಲ್ಲು ಹೊಡೆದವರು ಯಾರು ಅಂತ ಪತ್ತೆ ಹಚ್ಚಿ ಬಂಧಿಸ್ತಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮಲ್ಲಿಕಾರ್ಜುನ ಖರ್ಗೆ ಸುಳಿವು ಕೊಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಹೈಕಮಾಂಡ್ ತೀರ್ಮಾನ ಏನೇ ಇದ್ರೂ ನಾವು ಒಪ್ಪಿಕೊಳ್ಳುತ್ತೇವೆ.
ಎಐಸಿಸಿ ಹೊಸ ಕಚೇರಿ ಉದ್ಘಾಟನೆ ವೇಳೆ ಅವರು ಎಐಸಿಸಿ ಪುನಾರಚನೆ ಆಗಬೇಕು ಅಂದಿದ್ರು. ಆ ಅರ್ಥದಲ್ಲಿ ಅವರು ಹೇಳಿರಬಹುದು. ಕೆಲ ರಾಜ್ಯಗಳಲ್ಲಿ ನಮ್ಮ ಪಕ್ಷ ಸೋತಿದೆ, ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು. ಹೈಕಮಾಂಡ್ ತೀರ್ಮಾನ ಏನಿರುತ್ತೋ ಗೊತ್ತಿಲ್ಲ ಎಂದರು.