ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ:ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಾಷ್ಟಾವಧಿ ಮುಷ್ಕರಕ್ಕೆ ಬೆಂಬಲಾರ್ಥವಾಗಿ ಲಕ್ಮೇಶ್ವರದ ತಹಸೀಲ್ದಾರ ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ 4ನೇ ದಿನ ಮುಷ್ಕರಕ್ಕೆ ಗುರುವಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿದರು.
ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಜಿ.ಡಿ. ಹವಳದ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಎಸ್. ಹರ್ಲಾಪೂರ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಈ ಹಿಂದೆ ಕೈಗೊಂಡ ಮುಷ್ಕರದ ಯಾವುದೇ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸದ ಕಾರಣ ರಾಜ್ಯಾದ್ಯಂತ ಮತ್ತೆ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರಕ್ಕೆ ಇಳಿದಿದ್ದಾರೆ. ಇದರಿಂದ ಸಾರ್ವಜನಿಕರ ಕೆಲಸಗಳಿಗೆ ಸಮಸ್ಯೆ ಉಂಟಾಗುತ್ತದೆ ಎಂದರು.
ನAತರ ವಿವಿಧ ಸಂಘಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿ ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸಂಘ ಪ್ರಧಾನ ಕಾರ್ಯದರ್ಶಿ ಎಂ.ಎ. ನದಾಫ್, ಮಂಜುನಾಥ ವಾರದ ಹಾಗೂ ಪದಾಧಿಕಾರಿಗಳು, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಎಫ್.ಎಸ್. ತಳವಾರ, ಆರ್.ಡಿ.ಪಿ.ಆರ್ ನೌಕರರ ಸಂಘದ ಅಧ್ಯಕ್ಷ ಕೃಷ್ಣಪ್ಪ ಧರ್ಮರ, ವಿಕಲಚೇತನ ನೌಕರರ ಸಂಘದ ಅಧ್ಯಕ್ಷ ಬಿ.ಎಂ. ಕುಂಬಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಜುನಾಥ ಚೌಹಾಣ, ಎಂ.ಬಿ. ಹೂಗಾರ, ಎ.ಎಂ. ಅಕ್ಕಿ, ಶ್ರೀಕಾಂತ ಬಾಲೆಹೊಸೂರ, ಮಂಜುನಾಥ ಕೊಕ್ಕರಗುಂದಿ ಸೇರಿದಂತೆ ಎಲ್ಲಾ ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಎಲ್ಲಾ ಇಲಾಖೆಯ ನೌಕರ ಬಾಂಧವರು ಹಾಜರಿದ್ದು ಸಂಪೂರ್ಣ ಬೆಂಬಲ ಸೂಚಿಸಿದರು.
ಮುಷ್ಕರ ನಿರತ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಡಿ.ಎಸ್. ಕುಲಕರ್ಣಿ, ಉಪಾಧ್ಯಕ್ಷ ಎಚ್.ಕೃಷ್ಣಮೂರ್ತಿ, ಬಿ.ವೈ. ಮಲ್ಲಿಗವಾಡ, ಎನ್.ಬಿ. ಕನೋಜ, ಸುಬೇದಖಾನ ಪಠಾಣ, ಡಿ.ಎಲ್. ವಿಭೂತಿ, ಆರ್.ಎನ್. ನೆಗಳೂರ, ಫಾತಿಮಾ ಪತ್ತೆಖಾನ, ಸೌಮ್ಯ ಕೆ, ಕೆ.ಎನ್. ಪಾಟೀಲ ಮುಂತಾದವರಿದ್ದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ ಬೇಕು. ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಗುಣಮಟ್ಟದ ಟೇಬಲ್-ಕುರ್ಚಿ ಅಲ್ಮೆರಾ, ಮೊಬೈಲ್ ಸಿಯುಜಿ ಸಿಮ್ ಮತ್ತು ಡೇಟಾ, ಲ್ಯಾಪ್‌ಟಾಪ್, ಪ್ರಿಂಟರ್-ಸ್ಕಾö್ಯನರ್ ಒದಗಿಸುವುದರೊಂದಿಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಬಗ್ಗೆ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಹೋರಾಟಕ್ಕೆ ನೈತಿಕವಾಗಿ ಧೈರ್ಯ ತುಂಬುವ ನಿಟ್ಟಿನಲ್ಲಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದೇವೆ ಎಂದು ಜಿ.ಡಿ. ಹವಳದ ಹೇಳಿದರು.