ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿ ಕೆರಿಯರ್ ಆರಂಭಿಸಿದ ನಟಿ ರಶ್ಮಿಕಾ ಮಂದಣ್ಣ ಆಗಾಗ ಕನ್ನಡಿಗರ ಕೋಪಕ್ಕೆ ಕಾರಣವಾಗುತ್ತಲೆ ಇರುತ್ತಾರೆ. ಸದ್ಯ ಟಾಲಿವುಡ್ ಹಾಗೂ ಬಾಲಿವುಡ್ ಚಿತ್ರರಂಗದಲ್ಲಿ ಮಿಂಚುತ್ತಿರುವ ರಶ್ಮಿಕಾ ಹತ್ತಿದ ಏಣಿ ಒದೆ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ರಶ್ಮಿಕಾ ಮಂದಣ್ಣ ಹಾಗೂ ವಿಕ್ಕಿ ಕೌಶಲ್ ನಟನೆಯ ‘ಛಾವಾ’ ಸಿನಿಮಾ ಇಂದು ರಿಲೀಸ್ ಆಗಿದೆ. ಇದರ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆದಿದೆ. ಸಿನಿಮಾದ ಕಾರ್ಯಕ್ರಮದಲ್ಲಿ ರಶ್ಮಿಕಾ ಅವರು ತಮ್ಮನ್ನು ಪರಿಚಯಿಸಿಕೊಳ್ಳುವಾಗ “ನಾನು ಹೈದರಾಬಾದ್‌ನವಳು” ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ರಶ್ಮಿಕಾ ಅವರನ್ನು ಕನ್ನಡಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾನು ಹೈದರಾಬಾದ್‌ನವಳು, ಅಲ್ಲಿಂದ ನಾನು ಒಂಟಿಯಾಗಿ ಬಂದಿದ್ದೇನೆ. ಈಗ ನಾನು ನಿಮ್ಮ ಕುಟುಂಬದ ಭಾಗ ಆಗುತ್ತಿದ್ದೇನೆ ಎಂದು ಬಾಲಿವುಡ್ ಪ್ರೇಕ್ಷಕರನ್ನು ಮೆಚ್ಚಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಒಂದು ವೇಳೆ ರಶ್ಮಿಕಾ ಅವರಿಗೆ ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡದಿದ್ದರೆ ಇಷ್ಟು ಎತ್ತರಕ್ಕೆ ಬೆಳೆಯುತ್ತಿದ್ದರಾ? ಹತ್ತಿದ ಏಣಿಯನ್ನು ಎಂದು ಒದೆಯಬಾರದು ಎಂದು ರಶ್ಮಿಕಾರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.