ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

0
Spread the love

ಬೆಳಗಾವಿ: ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ ಎಂದರು.

Advertisement

ನಾನು ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇನ್ನೂ ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದರು.

 


Spread the love

LEAVE A REPLY

Please enter your comment!
Please enter your name here