ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ಭಕ್ತರು ಸಾವು!

0
Spread the love

ಪ್ರಯಾಗ್‌ರಾಜ್‌:- ಭೀಕರ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ಭಕ್ತರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜರುಗಿದೆ.

Advertisement

ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 19 ಜನರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 10 ಮಂದಿ ಭಕ್ತರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here