ಬೆಂಗಳೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿತ್ತು.. ಪಂಜಾಬ್ನ ಪಟಿಯಾಲ ರಸ್ತೆಯಲ್ಲಿ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಕುರುಬೂರ್ ಶಾಂತಕುಮಾರ್ ಗಾಯಗೊಂಡಿದ್ದು,
ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ, ಕುರುಬೂರ್ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಲಿಫ್ಟ್ ಮಾಡಲು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ವ್ಯವಸ್ಥೆ ಮಾಡಿದ್ದಾರೆ.
ಅಪಘಾತದಲ್ಲಿ ಶಾಂತಕುಮಾರ್ ಅವರಿಗೆ ಬೆನ್ನುಮೂಳೆಗೆ ತೀವ್ರ ಗಾಯಾವಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಶಾಂತಕುಮಾರ್ ಅವರನ್ನು ಏರ್ ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದು, ಈ ಸಂಬಂಧ ಸೋಮಣ್ಣ ಅವರು ಈಗಾಗಲೇ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ ಪಂಜಾಬ್ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಈ ಘಟನೆಯಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.