ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕ ಲಾವೂ ಮಾಮಲೇದಾರ್ ಕೊಲೆಯಾಗಿದೆ. ಆಟೋ ಚಾಲಕ ಲಾವೂ ಮಾಮಲೇದಾರ್ ಅವರ ಮೇಲೆ ಹಲ್ಲೆ ಮಾಡಿದ್ದು, ಆ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಸುಭಾಶ್ ನಗರ ನಿವಾಸಿ ಮುಜಾಹಿನ್‌ನನ್ನು ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಧ್ಯಾಹ್ನ ಸುಮಾರು 1 ಗಂಟೆಯ ಹೊತ್ತಿಗೆ ಖಡಬಝರ್ ಲಾಡ್ಜ್ ಬಳಿ ಆಟೋಗೆ ಲಾವೋ ಮಾಮಲೇದಾರ್ ಕಾರು ಟಚ್ ಆಗಿದೆ. ಈ ವಿಚಾರಕ್ಕೆ ಆಟೋ ಚಾಲಕ ಜಗಳಕ್ಕೆ ಇಳಿದಿದ್ದಾನೆ.
ನಂತರ ಆಟೋ ಚಾಲಕ ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ಬಳಿಕ ಲಾವೋ ಮಾಮಲೇದಾರ್ ಅವರು ಶ್ರೀನಿವಾಸ ಲಾಡ್ಜ್ ಬಳಿ ಬಂದು ನಿಂತಿದ್ದಾಗ ಆಟೋ ಚಾಲಕ ಅಲ್ಲೂ ಜಗಳ ಆರಂಭಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಆಟೋ ಚಾಲಕ ಲಾವೋ ಮಾಮಲೇದಾರ್ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾನೆ.
ಈ ವೇಳೆ ಅಲ್ಲಿದ್ದ ಜನ ಮತ್ತು ಲಾಡ್ಜ್ ಸಿಬ್ಬಂದಿ ಸೇರಿ ಜಗಳವನ್ನು ನಿಲ್ಲಿಸಿದ್ದಾರೆ. ಗಂಭೀರವಾಗಿ ಪೆಟ್ಟು ತಿಂದಿದ್ದ ಲಾವೋ ಮಾಮಲೇದಾರ್ ಲಾಡ್ಜ್‌ನ ಮೆಟ್ಟಿಲು ಹತ್ತುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈಗ ಲಾವೋ ಮಾಮಲೇದಾರ್ ಮೃತ ದೇಹವನ್ನು ಬೆಳಗಾವಿ ಬೀಮ್ಸ್‌ಗೆ ರವಾನೆ ಮಾಡಲಾಗಿದೆ.