WPL 2025: ಜಿದ್ದಾ-ಜಿದ್ದಿ ಕಣದಲ್ಲಿ ಮುಂಬೈ ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್‌ !

0
Spread the love

ವಡೋದಾರದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ದ್ವಿತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

Advertisement

ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸಿವರ್ ಬ್ರಂಟ್ 59 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ ಅಜೇಯ 80 ರನ್ ಬಾರಿಸಿದರು. ಇನ್ನು ನಾಯಕಿ ಹರ್ಮನ್​ಪ್ರೀತ್ ಕೌರ್ 42 ರನ್​ ಚಚ್ಚಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 19.1 ಓವರ್​ಗಳಲ್ಲಿ 164 ರನ್​ ಬಾರಿಸಿ ಆಲೌಟ್ ಆಯಿತು.

165 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶಫಾಲಿ ವರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು. ಅಲ್ಲದೆ ನಾಯಕಿ ಮೆಗ್ ಲ್ಯಾನಿಂಗ್ ಜೊತೆಗೂಡಿ ಮೊದಲ ವಿಕೆಟ್​ಗೆ 60 ರನ್​ಗಳ ಜೊತೆಯಾಟವಾಡಿದ್ದರು.

ಆದರೆ ಶಫಾಲಿ ವರ್ಮಾ (43) ಹಾಗೂ ಮೆಗ್ ಲ್ಯಾನಿಂಗ್ (15) ಔಟಾಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಮುಂಬೈ ಇಂಡಿಯನ್ಸ್ ಬೌಲರ್​ಗಳು ಡಿಸಿ ಪಡೆ 109 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಉರುಳಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ಕನ್ನಡತಿ ನಿಕಿ ಪ್ರಸಾದ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಅನುಭವಿ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ 19ರ ಹರೆಯದ ನಿಕಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ 4 ಫೋರ್​ ಬಾರಿಸಿ ಇನಿಂಗ್ಸ್ ಕಟ್ಟಿದರು.

ಇದಾಗ್ಯೂ ಕೊನೆಯ 2 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 21 ರನ್​ಗಳ ಅವಶ್ಯಕತೆಯಿತ್ತು. 19ನೇ ಓವರ್​ನಲ್ಲಿ ರಾಧಾ ಯಾದವ್ ಸಿಕ್ಸ್ ಬಾರಿಸುವುದರೊಂದಿಗೆ ಒಟ್ಟು 11 ರನ್​ ಕಲೆಹಾಕುವಲ್ಲಿ ಯಶಸ್ವಿಯಾದರು.

ಒಟ್ಟಾರೆ ಕೊನೆಯವರೆಗೂ ರೋಚಕತೆಯಿಂದ ಕೂಡಿದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 3ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ.


Spread the love

LEAVE A REPLY

Please enter your comment!
Please enter your name here