ಹುಬ್ಬಳ್ಳಿ: ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ ಮಾಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು,
ಕರ್ನಾಟಕ ಸರ್ಕಾರ ದಿವಾಳಿಯಾಗಿದೆ ಎನ್ನಲು ಹಲವಾರು ಉದಾಹರಣೆಗಳು ಕಣ್ಮುಂದೆ ಕಾಣುತ್ತಿವೆ. ಈಗ ಗೃಹ ಲಕ್ಷ್ಮಿ, ಅನ್ನ ಭಾಗ್ಯದ ಹೆಚ್ಚುವರಿ ಅಕ್ಕಿ ಇಲ್ಲ, ಹಣನೂ ಇಲ್ಲ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ರಾಜ್ಯ ಸರ್ಕಾರ ಒಂಬತ್ತು ವಿವಿಗಳನ್ನು ಬಂದ್ ಮಾಡುವ ತೀರ್ಮಾನ ಮಾಡಿದೆ. ಇದರ ಅರ್ಥ ರಾಜ್ಯ ಸರ್ಕಾರ ದಿವಾಳಿ ಹಂತಕ್ಕೆ ಬಂದು ನಿಂತಿದೆ. ಹಾಲಿನ ದರ, ಪೆಟ್ರೋಲ್, ಜನನ, ಮರಣ ಪತ್ರ ಪಡೆಯುವ ದರ ಸಹ ಜಾಸ್ತಿಯಾಗಿದೆ ಎಂದು ಸಚಿವ ಜೋಶಿ ಕಿಡಿಕಾರಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗೆ ನೋಟಿಸ್ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ನಾಯಕರು ಕೊಟ್ಟಿದ್ದಾರೆ. ಅದನ್ನು ರಾಷ್ಟ್ರೀಯ ನಾಯಕರೇ ವಿಚಾರ ಮಾಡ್ತಾರೆ ಎಂದು ಹೇಳಿದ್ದಾರೆ.