ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಪಟ್ಟಣದಿಂದ ಶಿಗ್ಲಿಗೆ ತೆರಳುವ ರಸ್ತೆಗೆ ಹೊಂದಿಕೊಂಡಿರುವ ಜಯಂತಿ ಸೋಮಶೇಖರ ಗಾಂಜಿ ಅವರ ಹೊಲದಲ್ಲಿ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ನೂರಾರು ಹೆಬ್ಬೇವು ಗಿಡಗಳು ಹಾಗೂ ನೀರಾವರಿ ಡ್ರಿಪ್‌ಸೆಟ್ ಕೇಬಲ್‌ಗಳು ಸುಟ್ಟು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ ಸೋಮವಾರ ಶಾಸಕ ಡಾ. ಚಂದ್ರು ಲಮಾಣಿ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿದ್ದ ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು.
Advertisement
ಗ್ರಾಮ ಆಡಳಿತ ಅಧಿಕಾರಿ ಡಿ.ಎಸ್. ಕುಲಕರ್ಣಿ, ಸೋಮಶೇಖರ ಗಾಂಜಿ, ಕಂದಾಯ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿದ್ದರು.