• About
  • Advertise
  • Privacy & Policy
  • Contact
Tuesday, November 3, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಪ್ರಯಾಣಿಕರಿಗೆ ಮೂಲಸೌಲಭ್ಯ ಒದಗಿಸುವಂತೆ ಸೂಚನೆ

Vijaya Sakshi News Desk by Vijaya Sakshi News Desk
February 17, 2025
in Gadag News
ಪ್ರಯಾಣಿಕರಿಗೆ ಮೂಲಸೌಲಭ್ಯ ಒದಗಿಸುವಂತೆ ಸೂಚನೆ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಹೊಸ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ ಪ್ರಾಧಿಕಾರದ ಸದಸ್ಯರು ಬಸ್ ನಿಲ್ದಾಣದಲ್ಲಿ ಶುಚಿತ್ವ ಕಾಪಾಡುವುದು ಸೇರಿ, ಪ್ರಯಾಣಿಕರಿಗೆ ಮೂಲಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದರು. ಅಲ್ಲದೇ, ಪಂಚ ಗ್ಯಾರಂಟಿಗಳು ತಲುಪುತ್ತಿರುವ ಬಗ್ಗೆ ಪ್ರಯಾಣಿಕರಿಂದ ಮಾಹಿತಿ ಪಡೆದರು.

ಬಸ್ ನಿಲ್ದಾಣದ ತುಂಬೆಲ್ಲ ಜೇಡು ಕಟ್ಟಿರುವುದು, ಕಸ ಎಲ್ಲೆಂದರಲ್ಲಿ ಬಿಸಾಡಿರುವುದು, ಶುದ್ಧ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸದಿರುವುದು, ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು ಹಾಗೂ ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳದಿರುವ ಕುರಿತು ಪರಿಶೀಲನೆ ನಡೆಸಿ 15 ದಿನದೊಳಗಾಗಿ ಸರಿಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಗದಗ ಹೊಸ ಬಸ್ ನಿಲ್ದಾಣ ರಾಜ್ಯಕ್ಕೇ ಮಾದರಿಯಾಗಿದ್ದು, ಸ್ಚಚ್ಛತೆ ಮಾಯವಾಗಿದೆ. ಆದಷ್ಟು ಬೇಗ ಮಳಿಗೆಗಳ ಮೇಲೆ ತುಂಬಿರುವ ವೇಸ್ಟೇಜ್‌ಗಳನ್ನು ತೆಗೆಸಬೇಕು. ಅಂಗಡಿಕಾರರು ಕಸವನ್ನು ನಗರಸಭೆ ಕಸ ತುಂಬುವ ವಾಹನದಲ್ಲೇ ಹಾಕಲು ಕ್ರಮ ಕೈಗೊಳ್ಳಬೇಕು. ಬಸ್‌ಗಳಲ್ಲಿ ಹಾಗೂ ಬಸ್ ನಿಲ್ದಾಣದಲ್ಲಿ ಅಂಟಿಸಿರುವ ಅನಧಿಕೃತ ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು. ಮುಂದಿನ 15 ದಿನದೊಳಗಾಗಿ ಗದಗ ಬಸ್ ನಿಲ್ದಾಣವನ್ನು ಹೊಸ ರೂಪಕ್ಕೆ ತರಬೇಕು ಎಂದು ಸೂಚಿಸಿದರು.

ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಗದಗ ಹೊಸ ಬಸ್ ನಿಲ್ದಾಣದ ತುಂಬೆಲ್ಲ ಜೇಡು ಕಟ್ಟಿಕೊಂಡಿದೆ. ಬಸ್ ಚಾಲಕರ, ನಿರ್ವಾಹಕರ ವಿಶ್ರಾಂತಿ ಗ್ರಹಗಳು ಕಸದಿಂದ ತುಂಬಿಕೊಂಡಿವೆ. ಶೌಚಾಲಯಗಳು ಸ್ವಚ್ಛತೆ ಇಲ್ಲದ ಕಾರಣ ಪ್ರಯಾಣಿಕರು ಬಳಸದಂತಾಗಿದೆ. ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಇಲ್ಲದ ಕಾರಣ ನಿಂತುಕೊಳ್ಳಬೇಕಾದ ಪರಿಸ್ಥಿತಿಯಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಬಸ್ ನಿಲ್ದಾಣದ ಉಸ್ತುವಾರಿ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣಕ್ಕೆ ಅಗತ್ಯವಾಗಿ ಬೇಕಾದ ಪರಿಕರಗಳನ್ನು ಪಟ್ಟಿ ಮಾಡಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಬೇಡಿಕೆ ಸಲ್ಲಿಸಿ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರೊಂದಿಗೆ ಮಾತನಾಡಿ ಗದಗ ಹೊಸ ಬಸ್ ನಿಲ್ದಾಣಕ್ಕೆ ವಿಶೇಷ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ಗದಗ ಹೊಸ ಬಸ್ ನಿಲ್ದಾಣದ ಆವರಣದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಇಟ್ಟಿರುವುದನ್ನು ಗಮನಿಸಿ, ಬೇಸಿಗೆ ಕಾಲ ಆರಂಭವಾಗುತ್ತಿರುವುದರಿಂದ ನಿತ್ಯ 24 ಗಂಟೆಗಳ ಕಾಲ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಡಿ. ದೇವರಾಜ್ ಸೇರಿ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನೀಲಮ್ಮ ಬೋಳನವರ, ಈಶ್ವರ ಹುಣಶೀಕಟ್ಟಿ, ಸದಸ್ಯರಾದ ಶರೀಫ್ ಬಿಳೆಯಲಿ, ಮುಖಂಡರಾದ ಶಾಂತಣ್ಣ ಮುಳವಾಡ, ಚಾಂದಸಾಬ್ ಕೊಟ್ಟೂರ, ಅನಿಲ ಗರಗ, ಮೋಹನ ದೊಡ್ಡಕುಂಡಿ ಸೇರಿ ಅನೇಕರು ಇದ್ದರು.

ಪ್ರಯಾಣಿಕರ ಕುಂದುಕೊರತೆ ಆಲಿಕೆ

ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ ಪ್ರಾಧಿಕಾರದ ಸದಸ್ಯರು ಗದಗ ಹೊಸ ಬಸ್ ನಿಲ್ದಾಣದಲ್ಲಿ ಸಂಚರಿಸಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದರು. ಜೊತೆಗೆ ಪಂಚಗ್ಯಾರಂಟಿಗಳು ಪ್ರತಿಯೊಬ್ಬರಿಗೂ ತುಲುಪುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಮಹಿಳೆಯರು ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದಾಗ ಮುಂದಿನ ತಿಂಗಳೊಳಗಾಗಿ ಬಾಕಿ ಕಂತಿನ ಹಣವನ್ನು ಪಾವತಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಇದೇ ವೇಳೆ ನರಗುಂದ ಭಾಗದ ಮಹಿಳೆಯೊಬ್ಬರು ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಉಚಿತವಾಗಿಲ್ಲ ಎಂದು ತಿಳಿಸಿದರು. ಆಗ ಬಿ.ಬಿ. ಅಸೂಟಿ ಅವರು ತಕ್ಷಣ ಅವರ ಮಾಹಿತಿ ಪಡೆದುಕೊಂಡು ಅರ್ಜಿ ಹಾಕಿ ಉಚಿತ ಪಡೆಯಲು ಸಂಬAಧಪಟ್ಟ ಸಿಬ್ಬಂದಿಗೆ ಸೂಚನೆ ನೀಡಿದರು.

Tags: b b asutiBreakingNewsguaranty samitiKarnatakaVijayasakshivijayasakshinews
ShareSendShare
Previous Post

ಹಿರೇವಡೆಯರ ಗುರುಗಳ ಜ್ಞಾನ ಅಪಾರ

Next Post

ಸಮಾಜಮುಖಿ ಕಾರ್ಯಗಳು ನಿರಂತರವಾಗಿರಲಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಮಾಜಮುಖಿ ಕಾರ್ಯಗಳು ನಿರಂತರವಾಗಿರಲಿ

ಸಮಾಜಮುಖಿ ಕಾರ್ಯಗಳು ನಿರಂತರವಾಗಿರಲಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಹಾಸನಾಂಬ ದರ್ಶನಕ್ಕೆ ಬಂದ ಮಹಿಳೆಯ 3 ಲಕ್ಷ ರೂ. ಚಿನ್ನದ ಬಳೆ ನಾಪತ್ತೆ! ಮರಳಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಹಾಸನಾಂಬ ದರ್ಶನಕ್ಕೆ ಬಂದ ಮಹಿಳೆಯ 3 ಲಕ್ಷ ರೂ. ಚಿನ್ನದ ಬಳೆ ನಾಪತ್ತೆ! ಮರಳಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

November 3, 2026
ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡ ದರ್ಶನ್: ವಾಕಿಂಗ್ ಮಾಡಲು ಸೂರ್ಯನ ಬೆಳಕು ಬರುವುದಿಲ್ಲ ಎಂದ ನಟ

ಬೇರೆ ನಟರ ಕಾರ್ಯಕ್ರಮಗಳಲ್ಲಿ ‘ಡಿ-ಬಾಸ್’ ಘೋಷಣೆ ಕೂಗಬೇಡಿ; ಅಭಿಮಾನಿಗಳಿಗೆ ಡಿ ಕಂಪನಿ ಖಡಕ್ ಎಚ್ಚರಿಕೆ!

November 3, 2026
ಬಸ್ ನಿಲ್ದಾಣದಲ್ಲಿ ಗುಟ್ಕಾ ಜಗಿದು ಉಗುಳಿದ್ರೆ ದಂಡ: ಚಾಲಕ-ನಿರ್ವಾಹಕರಿಗೂ ಹೊಸ ರೂಲ್ಸ್

ನಂದಿನಿ ಹಾಲಿನ ಬಳಿಕ ಬಸ್ ಪ್ರಯಾಣ ದರ ಏರಿಕೆ ಬಿಸಿ; ನ.5ರಿಂದಲೇ ಹೊಸ ಟಿಕೆಟ್ ದರ ಜಾರಿ?

November 3, 2026
ಒಮನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ; ಗುಜರಾತ್ ಮೂಲದ ನಾವಿಕ ಸಾವು, 13 ಮಂದಿ ರಕ್ಷಣೆ

ಒಮನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ; ಗುಜರಾತ್ ಮೂಲದ ನಾವಿಕ ಸಾವು, 13 ಮಂದಿ ರಕ್ಷಣೆ

November 3, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಹಾಸನಾಂಬ ದರ್ಶನಕ್ಕೆ ಬಂದ ಮಹಿಳೆಯ 3 ಲಕ್ಷ ರೂ. ಚಿನ್ನದ ಬಳೆ ನಾಪತ್ತೆ! ಮರಳಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಹಾಸನಾಂಬ ದರ್ಶನಕ್ಕೆ ಬಂದ ಮಹಿಳೆಯ 3 ಲಕ್ಷ ರೂ. ಚಿನ್ನದ ಬಳೆ ನಾಪತ್ತೆ! ಮರಳಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

November 3, 2026
ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡ ದರ್ಶನ್: ವಾಕಿಂಗ್ ಮಾಡಲು ಸೂರ್ಯನ ಬೆಳಕು ಬರುವುದಿಲ್ಲ ಎಂದ ನಟ

ಬೇರೆ ನಟರ ಕಾರ್ಯಕ್ರಮಗಳಲ್ಲಿ ‘ಡಿ-ಬಾಸ್’ ಘೋಷಣೆ ಕೂಗಬೇಡಿ; ಅಭಿಮಾನಿಗಳಿಗೆ ಡಿ ಕಂಪನಿ ಖಡಕ್ ಎಚ್ಚರಿಕೆ!

November 3, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper