ನಿಮ್ಮ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು: ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ದರ್ಶನ್‌

0
Spread the love

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಫೆ. 16ರಂದು ಸಿಂಪಲ್‌ ಆಗಿ ಆಪ್ತರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಬಳಿಕ ಜೈಲು ಸೇರಿದ್ದ ದರ್ಶನ್‌ ಜಾಮೀನಿನ ಮೇಲೆ ಹೊರ ಬಂದ ಬಳಿಕ ಇದು ಮೊದಲ ಬರ್ತಡೇ. ಕೇವಲ ಆಪ್ತರ ಸಮ್ಮುಖದಲ್ಲಿ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಟ್‌ ಮಾಡಿಕೊಂಡಿರುವ ದರ್ಶನ್‌ ಇದೀಗ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ.

Advertisement

‘ಪ್ರೀತಿಯ ಸೆಲೆಬ್ರಿಟಿಗಳೇ, ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ’ ಎಂದಿದ್ದಾರೆ.

‘ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ’ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here