ವಿಜಯಸಾಕ್ಷಿ ಸುದ್ದಿ, ಗದಗ
ಸರಕಾರ ಕೊರೋನಾ ನಿಯಂತ್ರಣಕ್ಕೆ ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಸಾರ್ವಜನಿಕರಿಂದ ಸಹಕಾರ ಸಿಗುತ್ತಿಲ್ಲ. ಅದರಲ್ಲೂ ಕೆಲ ರಾಜಕಾರಣಿಗಳ, ಮರಿ ಪುಡಾರಿಗಳ ದರ್ಪ ಹೇಳತೀರದು ಎನ್ನುವುದಕ್ಕೆ ನಗರದಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ.
ಗದಗ ಬೆಟಗೇರಿ ಅವಳಿ ನಗರದಲ್ಲಿ ಪೊಲೀಸರು, ಅಧಿಕಾರಿಗಳು ಎರಡು ದಿನಗಳಿಂದ ಸಾರ್ವಜನಿಕರಲ್ಲಿ, ವ್ಯಾಪಾರಸ್ಥರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸಹಕಾರ ಕೊಡುವ ಬದಲು ಅವರ ಜೊತೆಗೆ ವಾಗ್ವಾದ ನಡೆಸಿ ಮೊಂಡುತನ ಪ್ರದರ್ಶನ ಮಾಡಿದ ರಾಜಕಾರಣಿಯ, ನಗರಸಭೆಯ ಮಾಜಿ ಉಪಾಧ್ಯಕ್ಷನ ಪುತ್ರನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ನಗರಸಭೆ ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಅವರ ಪುತ್ರ ವಿನಾಯಕ ಬಾಕಳೆ ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.
ಗದಗ ನಗರದ ಸ್ಟೇಷನ್ ರಸ್ತೆಯಲ್ಲಿ ಇರುವ ನೀಲಕಮಲ್ ಎಕ್ಸ್ ಕ್ಲೂಸಿವ್ ಎಸ್ ಆರ್ ಫರ್ನಿಚರ್ ಅಂಗಡಿಯಲ್ಲಿ (NEELKAMAL EXCLUSIVE S R FURNITURE SHOP) ಕೋವಿಡ್-19 ಎರಡನೇ ಅಲೆ ಹರಡುವುದನ್ನು ನಿರ್ಲಕ್ಷ್ಯಸಿ ಅಂಗಡಿಯಲ್ಲಿ ಮಾಸ್ಕ್ ಧರಿಸದೇ, ಅಂಗಡಿಯಲ್ಲಿ ಸ್ಯಾನಿಟೇಸರ್ ಮತ್ತು ಥರ್ಮಲ್ ಸ್ಕ್ಯಾನರ್ ಇಡದೇ ಕೊರೋನಾ ವೈರಸ್ ಹರಡುವಂತೆ ಪ್ರಚೋದನೆ ನೀಡಿದ್ದಾರೆ.

ಸರಕಾರದ ಆದೇಶ ಮತ್ತು ನಿಯಮಗಳನ್ನು ಪಾಲನೆ ಮಾಡದೆ ನಿರ್ಲಕ್ಷ್ಯತನ ತೋರಿದ್ದನ್ನು ಪ್ರಶ್ನೆಸಿದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ ಕಾರಣಕ್ಕೆ ವಿನಾಯಕ ಬಾಕಳೆ ಪೊಲೀಸರು ಅತಿಥಿಯಾಗಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.