ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ: ರೈತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ!

0
Spread the love

ದಾವಣಗೆರೆ:- ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ರೈತರೊಬ್ಬರು, ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನಯಾನ ಮಾಡಿಸಿದ್ದಾರೆ. ರೈತನ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Advertisement

ಶಿರಗನಹಳ್ಳಿ ರೈತ ವಿಶ್ವನಾಥ್‌ರಿಂದ ಹತ್ತು ಜನ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸಿ ಆಸೆ ಪೂರೈಸಿದ್ದಾರೆ. ವಿಶ್ವನಾಥ್ ತೋಟಕ್ಕೆ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳೆಯರು, ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣ ಬೆಳೆಸಬೇಕೆಂಬ ಆಸೆ ವ್ಯಕ್ತಪಡಿಸಿದ್ದರು.

ಮಹಿಳಾ ಕಾರ್ಮಿಕರ ಆಸೆಯಂತೆ ಶಿವಮೊಗ್ಗ ಏರ್‌ಪೋರ್ಟ್‌ ಗೋವಾದವರೆಗೂ ವಿಮಾನ ಪ್ರಯಾಣ ಮಾಡಿಸಿದ್ದಾರೆ. ವಿಮಾನಯಾನ ಭಾಗ್ಯ ನೀಡಿದ ರೈತನ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here