ಹಾಸನ:- ಇತ್ತೀಚೆಗೆ ಜಾನುವಾರುಗಳ ಮೇಲಿನ ಕ್ರೌರ್ಯ ಜಾಸ್ತಿ ಆಗಿದ್ದು, ದುರುಳರು ತುಂಬಾ ನೀಚ ಹಂತಕ್ಕೆ ತಲುಪಿದ್ದಾರೆ. ಅದರಂತೆ ಹಾಸನ ಜಿಲ್ಲೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರು ಮೇಲೆ ಕೀಚಕರು ಮಚ್ಚಿನಿಂದ ಮನಬಂದಂತೆ ಕೊಚ್ಚಿದ್ದಾರೆ.
Advertisement
ನವೀನ್ ಎಂಬುವವರಿಗೆ ಸೇರಿದ ಕರುವನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದ ವೇಳೆ ದುರುಳರು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿನಲ್ಲಿ ನರಳಾಡುತ್ತಿದೆ.
ಈ ಹಿಂದೆಯೂ ನವೀನ್ ಅವರು ಸಾಕಿದ್ದ ಜಾನುವಾರುಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಇದೀಗ ಕೊಟ್ಟಿಗೆಯಲ್ಲಿ ಕಟ್ಟಿದ್ದ ಜಾನುವಾರು ಮೇಲೆ ಮಚ್ಚಿನಿಂದ ಕಡಿದಿದ್ದಾರೆ. ದುಷ್ಕರ್ಮಿಗಳ ಕೃತ್ಯದಿಂದ ರಕ್ತದ ಮಡುವಿಲ್ಲಿ ನರಳಾಡುತ್ತಿರುವ ಕರುವಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂ ಮುಖಂಡರು ಆಗ್ರಹಿಸಿದ್ದಾರೆ.