ವಿಜಯಸಾಕ್ಷಿ ಸುದ್ದಿ, ಗದಗ: ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಗದಗ ಸರ್ಕ್ಯೂಟ್ ಹೌಸ್ನಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಿರಹಟ್ಟಿ ಕ್ಷೇತ್ರದ ಶಾಸಕರಾದ ಜಿ.ಎಸ್. ಪಾಟೀಲ ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ಭಾಗವಹಿಸಿ ಚರ್ಚಿಸಿದರು.
Advertisement
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಕೃಷ್ಣಗೌಡ ಪಾಟೀಲ, ಸಿದ್ದು ಪಾಟೀಲ, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭಾರತಿ ಡಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಇತರರು ಇದ್ದರು.