ಸೆನ್ ಪೊಲೀಸರ ಕಾರ್ಯಾಚರಣೆ: 70 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

0
Spread the love

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಸೆನ್ ಪೊಲೀಸರು ಕಾರ್ಯಾಚರಣೆ ನಡೆಸಿ 70 ಲಕ್ಷ ರೂಪಾಯಿ ಮೌಲ್ಯದ 36 kg ಗಾಂಜಾ ಜಪ್ತಿ ಮಾಡಿದ್ದಾರೆ.

Advertisement

ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಗಾಂಜಾ ಸಾಗಿಸುತ್ತಿದ್ದ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಮಾಡಿಕೆರೆ ಕ್ರಾಸ್ ಸೆನ್ ಡಿವೈಎಸ್ಪಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾರಪ್ಪ, ದೇವಮ್ಮ, ಆಂಜಿ, ವೆಂಕಟರಮಣ, ಆದಿನಾರಾಯಣ ಬಂಧಿತರಾಗಿದ್ದು, ಬಂಧಿತರಿಂದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಗಾಂಜಾ ಸೇರಿ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here