ಕೊಪ್ಪಳ:- ನದಿಯಲ್ಲಿ ಈಜಲು ಹೋಗಿ ಹೈದರಾಬಾದ್ನ ಡಾಕ್ಟರ್ ದುರ್ಮರಣ ಹೊಂದಿರುವ ಘಟನೆ ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದಲ್ಲಿ ಜರುಗಿದೆ.
26 ವರ್ಷದ ಅನನ್ಯ ಮೋಹನ್ ಮೃತ ವ್ಯಕ್ತಿ. ಅನನ್ಯ ಸ್ನೇಹಿತರ ಜೊತೆಗೆ ರಜೆ ಕಳೆಯಲು ಸ್ಥಳೀಯ ಪ್ರವಾಸಿ ತಾಣಗಳಾದ ಅಂಜನಾದ್ರಿ, ಪಂಪಾಸರೋವರ, ಸಣಾಪೂರ ಕೆರೆಗೆ ಭೇಟಿ ನೀಡಿ, ತುಂಗಭದ್ರ ನದಿಯ ದಡದಲ್ಲಿಯೇ ಇದ್ದ ರೆಸಾರ್ಟ್ವೊಂದರಲ್ಲಿ ಮಂಗಳವಾರ ರಾತ್ರಿ ಉಳಿದುಕೊಂಡಿದ್ದಾರೆ. ಮುಂಜಾನೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ, ಕಲ್ಲು ಬಂಡೆಯ ಮೇಲಿಂದ ನದಿಗೆ ಜಿಗಿದಿದ್ದಾರೆ. ನದಿಯಲ್ಲಿ ಕಲ್ಲು ಬಂಡೆ ಹಾಗೂ ನದಿಯ ನೀರಿನ ರಭಸಕ್ಕೆ ಅನನ್ಯ ನೀರಿನಲ್ಲಿ ಮುಳುಗಿದ್ದಾರೆ.
ಇನ್ನೂ ಅನನ್ಯ ಮೋಹನ್ ಅವರು ಕಲ್ಲು ಬಂಡೆಯ ಮೇಲಿಂದ ನೀರಿಗೆ ಹಾರುವುದನ್ನು ಸ್ನೇಹಿತರು ವೀಡಿಯೋ ಮಾಡಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ.



