ಉದಯಗಿರಿ ಠಾಣೆ ಗಲಭೆ ಕೇಸ್‌: 11 ದಿನಗಳ ಬಳಿಕ ಪ್ರಚೋದನೆ ನೀಡಿದ್ದ ಮೌಲ್ವಿ ಅರೆಸ್ಟ್‌

0
Spread the love

ಮೈಸೂರು: ಮೈಸೂರಿನ ಉದಯಗಿರಿ ಠಾಣೆ ಮೇಲೆ ನಡೆದ ಕಲ್ಲು ತೂರಾಟದ ಪ್ರಕರಣ ಸಂಬಂಧ ಮೌಲ್ವಿ ಮುಫ್ತಿ ಮುಸ್ತಾಕ್​ನನ್ನು ಅರೆಸ್ಟ್‌ ಮಾಡಲಾಗಿದೆ. ಗಲಾಟೆ ನಡೆದು 11 ದಿನಗಳ ಬಳಿಕ ಸಿಸಿಬಿ ಪೊಲೀಸರು ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ.

Advertisement

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಂತರ ಯುವಕನೋರ್ವ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್ ಒಂದು ಗಲಭೆಗೆ ನಾಂದಿ ಹಾಡಿತ್ತು.

ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರ ಹಾಕಿ ವ್ಯಂಗ್ಯದ ಸಂದೇಶ ಪ್ರಕಟಿಸಿದ್ದ ಯುವಕ, ಅದರ ಜತೆಗೆ ಧರ್ಮವೊಂದಕ್ಕೆ ಅವಹೇಳನವಾಗುವಂಥ ಸಂದೇಶ ಪ್ರಕಟಿಸಿದ್ದ.

ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಆ ಸಂದರ್ಭದಲ್ಲಿ ಠಾಣೆ ಮುಂದೆ ಜಮಾಯಿಸಿದ್ದ ಗುಂಪೊಂದು ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸ್ ವಾಹನ, ಪೊಲೀಸ್ ಠಾಣೆ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿತ್ತು.


Spread the love

LEAVE A REPLY

Please enter your comment!
Please enter your name here