ಬಿಜೆಪಿ ನಾಯಕರು ಪಾದಯಾತ್ರೆ ಮಾಡಿದಾಗಲೇ ಅದು ರಾಜಕೀಯ ಪ್ರೇರಿತ ಅಂತ ಹೇಳಿದ್ದೆ: ಡಿ.ಕೆ. ಶಿವಕುಮಾರ್

0
Spread the love

ಬೆಂಗಳೂರು: ಬಿಜೆಪಿ ನಾಯಕರು ಪಾದಯಾತ್ರೆ ಮಾಡಿದಾಗಲೇ ಅದು ರಾಜಕೀಯ ಪ್ರೇರಿತ ಅಂತ ಹೇಳಿದ್ದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ.

Advertisement

ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ. ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ.

ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ. ಬಿಜೆಪಿಯವರು ತಮ್ಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ? ಇದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕುತಂತ್ರ. ಇದು ಹೆಚ್ಚು ದಿನ ನಡೆಯುವುದಿಲ್ಲ ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here