ಬಳ್ಳಾರಿ:- ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಸಂಬಂಧಿಸಿದ ನಿಗಮಗಳ ಸಭೆ ಕರೆದು ಚರ್ಚೆ ಮಾಡಲಾಗಿದೆ. 5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.
ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಬೇಕೆಂದು ಚರ್ಚಿಸಲಾಗಿದೆ. ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಪಶುಸಂಗೋಪನೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಂದ ದರ ಹೆಚ್ಚಳದ ಬಗ್ಗೆ ಒತ್ತಡ ಇದೆ. ಆದರೆ, ಸರ್ಕಾರದಿಂದ ಯಾವುದೇ ನಿರ್ಧಾರ ಹೊರಬಂದಿಲ್ಲ. ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದರು.