ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಕಾಂಗ್ರೆಸ್ ಶಾಸಕನ ಬರ್ಬರ ಕೊಲೆ!

0
Spread the love

ಬೆಂಗಳೂರು:- ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಶನಿವಾರ ತಡರಾತ್ರಿ ಲೈವ್ ಬ್ಯಾಂಡ್‌ನಿಂದ ಹೊರ ಬರುತ್ತಿದ್ದ ಕಾಂಗ್ರೆಸ್ ಶಾಸಕನನ್ನು ಬರ್ಬರ ಕೊಲೆ ಮಾಡಲಾಗಿದೆ.

Advertisement

ಕೊಲೆಯಾದ ಕಾಂಗ್ರೆಸ್ ಮುಖಂಡನನ್ನು ಶೇಖ್ ಹೈದರ್ ಅಲಿ ಎಂದು ಗುರುತಿಸಲಾಗಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆನೆಪಾಳ್ಯ ನಿವಾಸಿ ಹೈದರ್ ಸಾವನ್ನಪ್ಪಿದ್ದರು.

ವಿಚಾರ ತಿಳಿದು ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಲಾಂಗು-ಮಚ್ಚು ಝಳಪಿಸಿ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು ಎನ್ನಲಾಗಿದೆ.

ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here