HomeKarnataka Newsರಸ್ತೆ ಅಪಘಾತ: ಮೂವರು ಪಾದಚಾರಿಗಳ ಮೇಲೆ ಹರಿದ ಕಾರು, ಓರ್ವ ಸಾವು!

ರಸ್ತೆ ಅಪಘಾತ: ಮೂವರು ಪಾದಚಾರಿಗಳ ಮೇಲೆ ಹರಿದ ಕಾರು, ಓರ್ವ ಸಾವು!

For Dai;y Updates Join Our whatsapp Group

ಮಂಗಳೂರು:- ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದ ಕುಳಾಯಿ ಎಂಬಲ್ಲಿ ಜರುಗಿದೆ.

50 ವರ್ಷದ ದೀಪುಗೌಡ ಮೃತ ದುರ್ದೈವಿ. ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪಾದಚಾರಿಗಳು, ಕುಳಾಯಿಯ ಶಂಕರ ಭವನ ಹೋಟೆಲ್‌ನಿಂದ ಹೊರಬಂದು 66ನೇ ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಬಂದ ಕೆಎ-19-ಎಎ-0746 ನಂಬರ್‌ನ ಪಿಕಪ್ ವಾಹನ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮುಂದೆ ತಳ್ಳಲ್ಪಟ್ಟು, ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಪಕ್ಕಕ್ಕೆ ಬಿದ್ದಿದ್ದು, ಇನ್ನೋರ್ವನನ್ನು ಎಳೆದುಕೊಂಡು ಹೋಗಿದೆ.

ಕೂಡಲೇ ಮೂವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಗ ಮಧ್ಯೆ ಓರ್ವ ಸಾವನ್ನಪ್ಪಿದ್ದಾನೆ. ಇನ್ನುಳಿದ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img