HomeBengaluru Newsನೇಣಿಗೆ ಶರಣಾದ ಬಿಬಿಎಂಪಿ ವರ್ಕರ್: ಮಹಿಳೆಯ ಆತ್ಮಹತ್ಯೆಗೆ ಕಾರಣ?

ನೇಣಿಗೆ ಶರಣಾದ ಬಿಬಿಎಂಪಿ ವರ್ಕರ್: ಮಹಿಳೆಯ ಆತ್ಮಹತ್ಯೆಗೆ ಕಾರಣ?

For Dai;y Updates Join Our whatsapp Group

Spread the love

ಬೆಂಗಳೂರು:- ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜಪೇಟೆಯಲ್ಲಿ ಜರುಗಿದೆ. ಇನ್ನೂ ಘಟನೆಗೆ ವ್ಯಕ್ತಿಯೊಬ್ಬನ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದಿದೆ.

32 ವರ್ಷದ ನಂದಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ನಂದಿನಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ.

ಇನ್ನೂ ನಂದಿನಿ ಅವರು, 8 ವರ್ಷಗಳ ಹಿಂದೆ ಸೂರ್ಯ ಎಂಬಾತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ನಂದಿನಿಗೆ ವ್ಯಕ್ತಿಯೊಬ್ಬ ಆಗಾಗ್ಗೆ ಫೋನ್‌ ಮಾಡಿ ಕಿರಿಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪತಿ-ಪತ್ನಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ವ್ಯಕ್ತಿಯ ನಿರಂತರ ಕಿರುಕುಳದಿಂದ ಮನನೊಂದಿದ್ದ ನಂದಿನಿ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!