ಮೈಸೂರು: ಸಿದ್ದರಾಮಯ್ಯ ಸರ್ಕಾರ ಬಂದ ನಂತರ ನನ್ನ ಮೇಲೆ ಸಾಕಷ್ಟು FIR ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪುಂಡ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪೊಲೀಸರ ಮೇಲೆ ಆಕ್ರಮಣ ಮಾಡಿದ್ರು. ಈ ಘಟನೆ ನಡೆದ ಬೆನ್ನಲ್ಲೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು.
ಇದು ಪ್ರಚೋದನಕಾರಿಯಾ? ಸಿದ್ದರಾಮಯ್ಯ ಸರ್ಕಾರ ಬಂದ ನಂತರ ನನ್ನ ಮೇಲೆ ಹಲವು ಎಫ್ಐಆರ್ ಮಾಡಿದ್ದಾರೆ. ಈಗ ಉದಯಗಿರಿ ಠಾಣೆಯಲ್ಲಿ ಆಗಿದೆ. ಈ ರೀತಿ ಸಾಲು ಸಾಲು ಎಫ್ಐಆರ್ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಬೇಕು, ಮನೆಯಿಂದ ಹೊರಬರಬಾರದು ಅಂತ ಉದ್ದೇಶದಿಂದ ಮಾಡ್ತಾ ಇದ್ದಾರೆ ಎಂದು ಕಿಡಿ ಕಾರಿದರು.
ಆ ದಿನ ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ಮಾಡಿಲ್ಲ. ಮುಸ್ಲಿಮರು ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಅಂದಿದ್ದೇನೆ ಇದು ಪ್ರಚೋದನಕಾರಿನಾ? ಅವರ ಜನಸಂಖ್ಯೆ ನೋಡಿದ್ರೆ ಗೊತ್ತಾಗುತ್ತೆ. ನಿಮ್ಮ ಮನೆಯಲ್ಲಿ 1-2 ಮಕ್ಕಳಿರೋ ಎಷ್ಟು ಜನ ಇದ್ದಾರೆ ಹೇಳಿ. ನಾನು ಸತ್ಯ ಹೇಳಿದ್ದೇನೆ ಎಂದರು.