ದಾವಣಗೆರೆ: ವೀರಶೈವ ಲಿಂಗಾಯತ ಸಮಾಜದಿಂದ ಮಾತ್ರ ಸರ್ಕಾರ ರಚನೆ ಮಾಡಲು ಆಗಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜದಿಂದ ಮಾತ್ರ ರಾಜಕಾರಣ ಮಾಡಲು ಆಗಲ್ಲ.
Advertisement
ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಮುಂದೆಯೂ ಸಹ ನಾವು ಅಧಿಕಾರಕ್ಕೆ ಬರುತ್ತೇವೆ. ಈಗಾಗಲೇ ನಾವು ಕೆಲ ಮಠಾಧೀಶರನ್ನು ಸಂಪರ್ಕಿಸಿದ್ದೇವೆ. ಆದರೆ, ಕೆಲವರು ಯಡಿಯೂರಪ್ಪನವರಿಗೆ ವೀರಶೈವ ಲಿಂಗಾಯತರ ಬೆಂಬಲ ಇಲ್ಲ ಎಂದು ಹೇಳ್ತಿದ್ದಾರೆ.
ನಾವು ಮಠಾಧೀಶರರೊಂದಿಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ಸಭೆ ಮಾಡಿ ಮಠಾಧೀಶರ ಬೆಂಬಲ ಪಡೆದು, ಯಡಿಯೂರಪ್ಪ, ವಿಜಯೇಂದ್ರರಿಗೆ ಸಂಪೂರ್ಣ ಸಮಾಜ ಜೊತೆಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.