HomeGadag Newsವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ಕೈಬಿಡಿ

ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ಕೈಬಿಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ರಾಜ್ಯದಲ್ಲಿ ಕೊಪ್ಪಳ, ಹಾಸನ, ಹಾವೇರಿ ಮಂಡ್ಯ, ಚಾಮರಾಜನಗರ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿರುವ ಕ್ರಮವನ್ನು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸವಾದಿ) ಗಜೇಂದ್ರಗಡ ಸಮಿತಿಯು ತೀವ್ರವಾಗಿ ವಿರೋಧಿಸಿದ್ದು, ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಬಿಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಸಿಪಿಐಎಂ ಪಕ್ಷದ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಪತ್ರಿಕಾ ಹೇಳಿಕೆ ನೀಡಿ, ಹಿಂದಿನ ಬಿಜೆಪಿ ಸರ್ಕಾರವು ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮುನ್ನ ಯಾವುದೇ ಪೂರ್ವ ತಯಾರಿ ನಡೆಸಿರಲಿಲ್ಲ. ಇದರಿಂದ ಸ್ವಂತ ಜಾಗ, ಖಾಯಂ ಬೋಧಕರು ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ಅವು ಬಳಲುತ್ತಿದ್ದವು. ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಿಂದ ಬೇರ್ಪಡಿಸಿ ಈ ಜಿಲ್ಲಾ ಮಟ್ಟದ ವಿ.ವಿಗಳನ್ನು ಸ್ಥಾಪಿಸಿ ಕಾಲೇಜುಗಳನ್ನು ಸಂಯೋಜಿಸಲಾಗಿತ್ತು. ಇಂತಹ ಕಾಲೇಜುಗಳಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳನ್ನು ಅಲ್ಲಿಗೆ ವರ್ಗಾಯಿಸಲಾಗಿತ್ತು. ಹೀಗೆ ತರಾತುರಿಯಲ್ಲಿ ಈ ವಿಶ್ವವಿದ್ಯಾಲಯಗಳನ್ನು ಆರಂಭಿಸಿದ್ದ ಬಿಜೆಪಿ ಅದಕ್ಕೆಯಾವುದೇ ಹಣಕಾಸಿನ ನೆರವನ್ನು ನೀಡಿರಲಿಲ್ಲ.

ಈ ನಡುವೆ ವಿಶ್ವವಿದ್ಯಾಲಯಗಳಿಗೆ ಸರ್ಕಾರಅನುದಾನವನ್ನೇ ನೀಡದೆ ಸ್ವಂತ ಹಣಕಾಸು ಮೂಲವನ್ನು ಸೃಷ್ಟಿಸಿಕೊಳ್ಳಲು ವಿಶ್ವವಿದ್ಯಾಲಯಗಳ ಮೇಲೆ ಒತ್ತಡ ಹೇರಲಾಯಿತು. ಇದರಿಂದ ವಿವಿಧ ನೆಪವೊಡ್ಡಿ ವಿದ್ಯಾರ್ಥಿಗಳಿಂದ ಹಣ ಕಕ್ಕಿಸುವ ಕೆಲಸಕ್ಕೆ ವಿಶ್ವವಿದ್ಯಾಲಯಗಳು ಮುಂದಾದವು. ಉನ್ನತ ಶಿಕ್ಷಣವನ್ನು ಖಾಸಗೀಕರಿಸುವ ಭಾಗವಾಗಿಯೇ ಕೇಂದ್ರದ ಒತ್ತಡಕ್ಕೆ ಮಣಿದ ಅಂದಿನ ಬಿಜೆಪಿ ಈ ಕ್ರಮಕೈಗೊಂಡಿತ್ತು.

ಆದರೆ ಇದೀಗ ಅದಕ್ಕೆ ಅಗತ್ಯವಿರುವ ಹಣಕಾಸು ನೆರವು ನೀಡಿ ಅವುಗಳನ್ನು ಬಲಪಡಿಸಬೇಕಾದ ರಾಜ್ಯದಕಾಂಗ್ರೆಸ್ ಸರ್ಕಾರವು ಆರ್ಥಿಕ ನೆಪವನ್ನು ಮುಂದುಮಾಡಿ ಆ ವಿ.ವಿಗಳನ್ನು ಮುಚ್ಚುವ ನಿರ್ಧಾರಕ್ಕೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ದಾವಲಸಾಬ ತಾಳಿಕೋಟಿ ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!