2026ರಿಂದ ವರ್ಷಕ್ಕೆ 2 ಬಾರಿ 10th ಎಕ್ಸಾಂ: ಸಿಬಿಎಸ್‌ಇ!

0
Spread the love

ನವದೆಹಲಿ:- 2026ರಿಂದ ವರ್ಷಕ್ಕೆ 2 ಬಾರಿ ಹತ್ತನೇ ತರಗತಿ ಎಕ್ಸಾಂ ನಡೆಯಲಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

Advertisement

ಪ್ರತಿ ವರ್ಷ 10ನೇ ತರಗತಿಗೆ 2 ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವಂತೆ CBSC ಯೋಜಿಸಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಹೆಚ್ಚುವರಿ ಅವಕಾಶವನ್ನು ಒದಗಿಸುತ್ತದೆ ಎಂದು ಹೇಳಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಿಬಿಎಸ್‌ಇ ಅಧಿಕಾರಿಗಳು, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ, ಕೇಂದ್ರೀಯ ವಿದ್ಯಾಲಯ ಸಂಘಟನೆ ಹಾಗೂ ನವೋದಯ ವಿದ್ಯಾಲಯ ಸಮಿತಿ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹೊಸದಾಗಿ ಅನುಮೋದಿಸಲಾದ ಕರಡು ಮಾರ್ಗಸೂಚಿಗಳ ಪ್ರಕಾರ, 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಎರಡು ಹಂತಗಳಲ್ಲಿ ನಡೆಯಲಿವೆ. ಮೊದಲ ಹಂತವು ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದ್ದು, ಎರಡನೇ ಹಂತವು ಮೇ ತಿಂಗಳಲ್ಲಿ ನಡೆಯಲಿದೆ. ಎರಡೂ ಪರೀಕ್ಷೆಗಳು ಪೂರ್ಣ ಪಠ್ಯಕ್ರಮವನ್ನು ಒಳಗೊಂಡಿರುತ್ತವೆ.

ಈ ಯೋಜನೆ ಮೂಲಕ ಪರೀಕ್ಷೆಯಲ್ಲಿ ಸುಧಾರಣೆ ತರುವುದು ಪ್ರಮುಖ ಉದ್ದೇಶವಾಗಿದೆ. ಇದರಿಂದ ಒತ್ತಡ ಕಡಿಮೆ, ಪರೀಕ್ಷೆಯಲ್ಲಿ ಆತಂಕ, ಅನಾರೋಗ್ಯದ ತೊಂದರೆಗಳಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ. ಒಂದೇ ಪರೀಕ್ಷೆಯಲ್ಲಿ ಹೆಚ್ಚಿನ ಒತ್ತಡವಿಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಎಂದು ತಿಳಿಸಿದೆ.


Spread the love

LEAVE A REPLY

Please enter your comment!
Please enter your name here