ಸಕ್ಕರೆನಾಡಲ್ಲಿ ಗುಂಡಿನ ಸದ್ದು: ಪೊಲೀಸರಿಗೆ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರಿಂದ ಶೂಟೌಟ್

0
Spread the love

ಮಂಡ್ಯ: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಡ್ಯ ತಾಲೂಕಿನ ಬಿ.ಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

Advertisement

ಸುಭಾಷ್ ಅಲಿಯಾಸ ಸುಬ್ಬು ಮೇಲೆ ಫೈರಿಂಗ್ ಮಾಡಲಾಗಿದ್ದು, ಐದಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.

ಬಿ. ಹೊಸೂರು ಸಮೀಪ ಆತ ತಲೆಮರೆಸಿಕೊಂಡಿರುವ ಮಾಹಿತಿ ಗೊತ್ತಾಗಿ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಮಂಡ್ಯ ಪೂರ್ವ ಠಾಣೆಯ ಪಿಎಸ್‌ಐ ಶೇಷಾದ್ರಿ ಕುಮಾರ್ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಗಾಯಾಳು ಆರೋಪಿಯನ್ನು ಬಂಧಿಸಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here