ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಹರಿಹರದ ಮಹಾತಪಸ್ವಿ ಸೇವಾ ಪ್ರತಿಷ್ಠಾನದ ಲಕ್ಷ್ಮೇಶ್ವರ ಶಾಖೆಯಿಂದ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಹಾತಪಸ್ವಿ ಫೌಂಡೇಶನ್ ಹರಿಹರದ ನಿರ್ದೇಶಕಿ ಸಂಗೀತಾ ಧರ್ಮಾಯತ್ ಮಾತನಾಡಿ, ಪ್ರತಿಷ್ಠಾನದಿಂದ ಪೂಜ್ಯ ಗುರುರಾಜ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಪ್ರತಿವರ್ಷ ಶಿವರಾತ್ರಿಯಂದು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಕಾರ್ಯಕ್ರಮ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದು, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದು ಕಾರ್ಯಕ್ರಮ ಉದ್ದೇಶವಾಗಿದೆ. ರಾಜ್ಯದಲ್ಲಿ ಅಲ್ಲದೆ ಹೊರರಾಜ್ಯಗಳಲ್ಲಿ ಮಹಾತಪಸ್ವಿ ಫೌಂಡೇಶನ್ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದೆ ಎಂದು ಹೇಳಿದರು.
ಈ ವೇಳೆ ವಿಜಯ ಹೊಳ್ಳಿಯವರಮಠ, ಬಸವರಾಜ ಹಡಪದ, ಕವಿತಾ ಹೊಳ್ಳಿಯವರಮಠ, ಲಾವಣ್ಯ ಬಿಂಕದಕಟ್ಟಿ, ಮಂಜುಳಾ ಮುಳಗುಂದ, ಲಾವಣ್ಯ ಬಿಂಕದಕಟ್ಟಿ, ವೀರೇಶ್ವರಯ್ಯ ಫಕ್ಕೀರಸ್ವಾಮಿಮಠ ಮುಂತಾದವರಿದ್ದರು.