ವಿಜಯಸಾಕ್ಷಿ ಸುದ್ದಿ, ಗದಗ: ಮಹಾಶಿವರಾತ್ರಿಯ ಅಂಗವಾಗಿ ಆಂಧ್ರಪ್ರದೇಶ ರಾಜ್ಯದ ನಂದ್ಯಾಲ ಜಿಲ್ಲೆಯ ಶ್ರೀಶೈಲದಲ್ಲಿ ಮಲ್ಲಿಕಾರ್ಜುನ ಜಾತ್ರಾಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಭಕ್ತಜನಸಾಗರದ ಮಧ್ಯೆ ಗುರುವಾರ ವಿಜೃಂಭಣೆಯಿಂದ ಜರುಗಿತು.
ಸಹಸ್ರಾರು ಭಕ್ತರು ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥಗಳನ್ನು ಪೂರೈಸು ಎಂದು ಮಲ್ಲಿಕಾರ್ಜುನನಲ್ಲಿ ಭಕ್ತಿ ಸಮರ್ಪಿಸಿದರು. ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ ಸೇರಿ ಗದಗ ಜಿಲ್ಲೆಯಿಂದಲೂ ಅನೇಕ ಭಕ್ತರು ಪಾಲ್ಗೊಂಡು ರಥೋತ್ಸವದಲ್ಲಿ ಭಾಗಿಯಾಗಿ ಶ್ರೀಶೈಲ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾದರು.
ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಅಶೋಕ ಮಂದಾಲಿ ಅವರು ಪಾಲ್ಗೊಂಡಿದ್ದರು.



