HomeGadag Newsಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ

ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆಎಲ್‌ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯವು ಜಿಲ್ಲೆಯ ನಾಗಾವಿ ಗ್ರಾಮದಲ್ಲಿ ಎನ್‌ಎಸ್‌ಎಸ್ ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರ ಹಮ್ಮಿಕೊಂಡಿದ್ದು, 5ನೇ ದಿನದ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದವು.

ಉಪನ್ಯಾನಕರಗಿ ಆಗಮಿಸಿದ್ದ ಪ್ರೊ. ವೀಣಾ. ತಿರ್ಲಾಪೂರ ಆರೋಗ್ಯಕರ ಸಮಾಜಕ್ಕಾಗಿ ಯುವಜನತೆ ವಿಷಯವಾಗಿ ಉಪನ್ಯಾಸ ನೀಡಿ, ಯುವಕರು ಕೆಟ್ಟ ಚಟಗಳಿಂದ ದೂರವಿದ್ದು, ಮಾನಸಿಕವಾಗಿ ಗಟ್ಟಿಯಾಗಿರಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ನಾಗಾವಿ ಗ್ರಾ.ಪಂ ಸದಸ್ಯರಾದ ಉಳಿವೆಪ್ಪಾ ಬ.ಶಿಗ್ಲಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಜಂಬಪ್ಪಾ ಮಡಿವಾಳರ್, ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ನೇತ್ರಾವತಿ ಅಂಗಡಿ, ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ. ವಾಗೀಶ ಗು.ರೇಶ್ಮಿ, ಎನ್‌ಎಸ್‌ಎಸ್. ಘಟಕದ ಕಾರ್ಯದರ್ಶಿ ಪವನಕುಮಾರ ಕುಲಕರ್ಣಿ, ಸಾಕ್ಷಿ ಹೊಸಮಠ ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಸತೀಶ ಕಣವಿ ಸ್ವಾಗತಿಸಿದರು. ಶಿಬಿರಾರ್ಥಿ ಸಾಕ್ಷಿ ಹೊಸಮಠ ನಿರೂಪಿಸಿದರು, ಕಿರಣ ಓಂಕಾರಿ ವಂದಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!