ಪೆಟ್ರೋಲ್, ಡೀಸೆಲ್ ಹಾಕಿಸಿದ್ರೆ ವಾಹನ ಸೀಜ್: ದೆಹಲಿಯಲ್ಲಿ ಬಂತು ಹೊಸ ರೂಲ್ಸ್!

0
Spread the love

ನವದೆಹಲಿ:- ದೆಹಲಿಯಲ್ಲಿ ಜಾರಿಯಾಗಿರುವ ಹೊಸ ರೂಲ್ಸ್ ನಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಯಾವುದೇ ವಾಹನ ಚಲಾಯಿಸಬೇಕಂದ್ರೂ ಪೆಟ್ರೋಲ್ ಅಥವಾ ಡೀಸೆಲ್ ಬೇಕೇಬೇಕು. ಅಂತದ್ರಲ್ಲಿ ಪೆಟ್ರೋಲ್ ಕೊಡಲ್ಲ ಅಂದ್ರೆ ಹೇಗೆ ಹೇಳಿ. ಇದೀಗ ಅಂತದ್ದೇ ನಿಯಮವೊಂದು ಜಾರಿಗೆ ತರಲು ದೆಹಲಿ ಸರ್ಕಾರ ನಿರ್ಧರಿಸಿದೆ.

Advertisement

ಎಸ್, 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌, ಡೀಸೆಲ್‌ ನೀಡುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್‌ ಸಿಂಗ್‌ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ. ಇದು ವಾಹನ ಸವಾರರಿಗೆ ಸಂಕಷ್ಟ ತಂದಿದೆ.

ಮಾರ್ಚ್ 31 ರ ನಂತರ ಈ ನಿಯಮ ಜಾರಿಗೆ ಬರಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರದಾದ್ಯಂತ ಪೆಟ್ರೋಲ್‌ ಬಂಕ್‌ಗಳಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಸರ್ಕಾರ ನಿಲ್ಲಿಸಲಿದೆ ಎಂದರು.

ಪೆಟ್ರೋಲ್ ಬಂಕ್‌ಗಳಲ್ಲಿ ಹಳೆಯ ವಾಹನಗಳಿಗೆ ಇಂಧನ ತುಂಬಿಸುವಂತಿಲ್ಲ. ಹಳೆಯ ವಾಹನಗಳನ್ನು ಗುರುತಿಸಲು ವಿಶೇಷ ತಂಡ ರಚನೆ ಮಾಡಲಾಗುವುದು. ಮಾಲಿನ್ಯ ನಿಯಂತ್ರಣಕ್ಕೆ ಹೋಟೆಲ್‌ಗಳಲ್ಲಿ ಹೊಗೆ ನಿರೋಧಕ ಅಳವಡಿಕೆ ಕಡ್ಡಾಯ ಎಂದು ಹೇಳಿದ್ದಾರೆ.

2025 ರ ಡಿಸೆಂಬರ್‌ ವೇಳೆಗೆ ದೆಹಲಿಯಲ್ಲಿ ಸುಮಾರು ಶೇ.90 ರಷ್ಟು ಸಾರ್ವಜನಿಕ ಸಿಎನ್‌ಜಿ ಬಸ್‌ಗಳನ್ನು ಹಂತಹಂತವಾಗಿ ಸ್ಥಗಿತಗೊಳಿಸಲಾಗುವುದು. ಸ್ವಚ್ಛ ಮತ್ತು ಸುಸ್ಥಿರ ಸಾರ್ವಜನಿಕ ಸಾರಿಗೆಯತ್ತ ಸರ್ಕಾರದ ಒತ್ತು ನೀಡುವ ಭಾಗವಾಗಿ ಎಲೆಕ್ಟ್ರಿಕ್‌ ಬಸ್‌ಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here