ದಾವಣಗೆರೆ: ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗ್ತಾರೆ ಎಂದು ಶಾಸಕ ಬಸವರಾಜ್ ಶಿವಗಂಗಾ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು,
Advertisement
ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗ್ತಾರೆ. ಪಕ್ಷಕ್ಕಾಗಿ ಡಿಕೆ ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿಕೆ ಶಿವಕುಮಾರ್ ಅವರ ಪಾತ್ರ ಇದೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ಬದ್ಧರಾಗಿರ್ತೀವಿ ಎಂದರು.
ಇನ್ನೂ ಇದೇ ಸಂದರ್ಭದಲ್ಲಿ ಸಚಿವ ಕೆಎನ್ ರಾಜಣ್ಣ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಶಿವಗಂಗಾ ಕೆಎನ್ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರ ಆಗ್ತಾ ಇದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎನ್ನುವ ಮೂಲಕ ಕೆ.ಎನ್ ರಾಜಣ್ಣಗೂ ಶಿವಗಂಗಾ ಟಾಂಗ್ ನೀಡಿದ್ದಾರೆ.