Sucide Case: 10 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು!

0
Spread the love

ಬೆಂಗಳೂರು:- 10 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಜರುಗಿದೆ.

Advertisement

ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿ 23 ವರ್ಷದ ಪೂಜಾಶ್ರೀ ನೇಣಿಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ವಿವಾಹವಾಗಿದ್ದರು. ಕೆಲಸ ಅರಸುವ ಸಲುವಾಗಿ ಕಳೆದ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರೋ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು.

ಸಂಬಂಧಿಕರ ಮನೆಯಲ್ಲೇ ಇದ್ದ ಪೂಜಾಶ್ರೀ ಅಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂಜಾಶ್ರೀ ಆತ್ಮಹತ್ಯೆ ಬಗ್ಗೆ ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here