ರನ್ಯಾ ರಾವ್ ಮನೆಯಲ್ಲಿ ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ: ಸೆಕ್ಯುರಿಟಿ ಚೆಕ್ ನಿಂದ ತಪ್ಪಿಸಿಕೊಳ್ಳಲು ನಟಿ ಏನ್‌ ಮಾಡ್ತಿದ್ರು ಗೊತ್ತಾ?

0
Spread the love

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ ಅವನ್ನು ಪೊಲೀಸರು ಬಂಧಿಸಿದ್ದಾರೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ರನ್ಯಾ ರಾವ್‌ ಮೇಲೆ ಕೇಳಿ ಬಂದಿದ್ದು ನಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇದೀಗ ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Advertisement

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಮೊತ್ತದ ಚಿನ್ನ ವಶಪಡಿಸಿಕೊಂಡಿರುವುದು ಇದೇ ಮೊದಲು ಎನ್ನಲಾಗಿದೆ. ನಟಿಯನ್ನು ಬಂಧಿಸಿದ ಬಳಿಕ ಡಿಆರ್ಐ ಅಧಿಕಾರಿಗಳು ಆಕೆಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದು ಈ ವೇಳೆ ಕೋಟ್ಯಾಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ನ ಫ್ಲ್ಯಾಟ್ ನಲ್ಲಿ ರನ್ಯಾ ಮನೆ ಇದ್ದು, 5ಕ್ಕೂ ಹೆಚ್ಚು ಅಧಿಕಾರಿಗಳು ಫ್ಲ್ಯಾಟ್ ನಲ್ಲಿ ಪರಿಶೀಲನೆ ನಡೆಸಿದ್ದರು ಈ ವೇಳೆ ರನ್ಯಾ ಮನೆಯಲ್ಲಿ 2.06 ಕೆಜಿ ಚಿನ್ನ ಹಾಗೂ 2.67 ಕೋಟಿ ನಗದು ಹಣ ಪತ್ತೆಯಾಗಿದ್ದು ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನಟಿ ರನ್ಯಾ ಕಳೆದ 15 ದಿನಗಳಲ್ಲಿ ನಾಲ್ಕು ಬಾರಿ ಗಲ್ಫ್ ದೇಶಕ್ಕೆ ಹೋಗಿ ಬಂದಿದ್ದರಂತೆ. ಪ್ರತಿ ಬಾರಿ ನಟಿ ರನ್ಯಾ ವಿಮಾನ ನಿಲ್ದಾಣಕ್ಕೆ ಹೋದಾಗಲೂ ಹಿರಿಯ ಅಧಿಕಾರಿಗಳು ಬಳಸುವ ಅಫಿಷಿಯಲ್ ಪ್ರೋಟೊಕಾಲ್ ಸರ್ವೀಸ್ ಅನ್ನು ಬಳಸಿ ಸೆಕ್ಯುರಿಟಿ ಚೆಕ್ ನಿಂದ ತಪ್ಪಿಸಿಕೊಳ್ಳುತ್ತಿದ್ದರಂತೆ. ಮತ್ತು ಪ್ರತಿಬಾರಿ ಚಿನ್ನ ಕಳ್ಳಸಾಗಣೆಗೆ ಹೋದಾಗಲು ಒಂದೇ ರೀತಿಯ ಬಟ್ಟೆ ಹಾಕಿಕೊಂಡು ಹೋಗುತ್ತಿದ್ದರಂತೆ. ಬೆಲ್ಟ್ ನ ಒಳಗೆ ಚಿನ್ನದ ಗಟ್ಟಿಗಳನ್ನು ಇಟ್ಟುಕೊಂಡು, ಆ ಬೆಲ್ಟು ಹೊರಗೆ ಕಾಣದಂತೆ ಬಟ್ಟೆ ಹಾಕಿಕೊಂಡು ಬರುತ್ತಿದ್ದರಂತೆ. ಹಾಗಾಗಿ ಇದುವರೆಗೂ ನಟಿಯ ಬಗ್ಗೆ ಯಾರಿಗೂ ಅನುಮಾನ ಬಂದಿರಲಿಲ್ಲ. ಆದರೆ ದೆಹಲಿಯ ಡಿಆರ್’ಐ ಅಧಿಕಾರಿಗಳಿಗೆ ಅನುಮಾನ ಬಂದು ತಪಾಸಣೆ ನಡೆಸಿದಾಗ ನಟಿಯ ಕಳ್ಳತನ ಬಯಲಾಗಿದೆ.


Spread the love

LEAVE A REPLY

Please enter your comment!
Please enter your name here