Kalpana Raghavendar: ನಿದ್ದೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಖ್ಯಾತ ಹಿನ್ನೆಲೆ ಗಾಯಕಿ..!

0
Spread the love

ಜನಪ್ರಿಯ ಟಾಲಿವುಡ್ ಗಾಯಕಿ ಕಲ್ಪನಾ ಅವರ ಆತ್ಮಹತ್ಯೆಗೆ ಯತ್ನಿಸಿರುವುದು ಚಿತ್ರರಂಗದಲ್ಲಿ ಸಂಚಲನ ಮೂಡಿಸುತ್ತಿದೆ. ಮಂಗಳವಾರ ಅವರು ತಮ್ಮ ಮನೆಯಲ್ಲಿ ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯ ಬಳಿಕ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಗಾಯಕಿಯನ್ನು ದಾಖಲಿಸಲಾಗಿದೆ.

Advertisement

ಹೈದರಾಬಾದ್‌ನ ನಿವಾಸದಲ್ಲಿ ಮಾರ್ಚ್ 2ರಂದು ಗಾಯಕಿ ಆತ್ಮಹತ್ಯೆಗೆ ಯತ್ನಿಸಿದ್ದು, 2 ದಿನಗಳಿಂದ ಮನೆಯ ಬಾಗಿಲುಗಳು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಪೊಲೀಸರು ಗಾಯಕಿಯ ಮನೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗ ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ, ಅವರು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಲ್ಪನಾ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಗಾಯಕಿಗೆ ಪ್ರಜ್ಞೆ ಬಂದಿದೆ. ಕಲ್ಪನಾಗೆ ಸದ್ಯ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಗಾಯಕಿ ಕಲ್ಪನಾ ಸುಮಾರು 27 ವರ್ಷಗಳಿಂದ ಚಲನಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಗಾಯಕಿಯಾಗಿ ಮಾತ್ರವಲ್ಲದೆ, ಡಬ್ಬಿಂಗ್ ಕಲಾವಿದೆ ಮತ್ತು ನಟಿಯಾಗಿಯೂ ಅವರು ವಿಶೇಷ ಮನ್ನಣೆ ಗಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here