HomeBengaluru NewsLokayukta Raid: ಭ್ರಷ್ಟರಿಗೆ ಶಾಕ್; ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು 'ಲೋಕಾ' ದಾಳಿ!

Lokayukta Raid: ಭ್ರಷ್ಟರಿಗೆ ಶಾಕ್; ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ‘ಲೋಕಾ’ ದಾಳಿ!

For Dai;y Updates Join Our whatsapp Group

Spread the love

ಬೆಂಗಳೂರು:- ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿದ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ದಾಳಿ ನಡೆಸಿ ಪರಿಶೀಲಿಸಿದರು.

ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, 8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಅದರಂತೆ ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್​, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್​ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ AEE ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಕಡೆ ದಾಳಿ ನಡೆದಿದೆ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ AEE ಬೆಸ್ಕಾಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಕೆ.ಆರ್.ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.

ಬಾಗಲಕೋಟೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್​ ಅವರ ಬಾಗಲಕೋಟೆ ಕಚೇರಿ, ಬೀಳಗಿ ತಾಲೂಕಿನ ತಳ್ಳಿಕೇರಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ತುಮಕೂರಿನಲ್ಲಿ ವೈದ್ಯ ಡಾ.ಜಗದೀಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯಲ್ಲಿರುವ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯನಾಗಿರುವ ಜಗದೀಶ್​ ಅವರು ತುಮಕೂರಿನ ಮಂಜುನಾಥ್ ನಗರದಲ್ಲಿ ಹೊಂದಿರುವ ಜಗದೀಶ್​ ಕಾಂಪ್ಲೆಕ್ಸ್, ಶಿರಾ ತಾಲೂಕಿನ ಯಲ್ಪೆನಹಳ್ಳಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಜಗದೀಶ್ ಪತ್ನಿ ರೂಪಾ, ಸೋದರ ಕಾಂತರಾಜ್ ಮನೆ ಮೇಲೂ ರೇಡ್ ಮಾಡಲಾಗಿದೆ. ಶಿರಾ ತಾಲೂಕಿನ ಬರಗೂರಿನಲ್ಲಿ ತಾಯಿಯ ಹೆಸರಿನಲ್ಲಿ ಆಸ್ತಿ ಮಾಡಿರುವುದು ದಾಳಿ ವೇಳೆ ಪತ್ತೆಯಾಗಿದೆ.

ಒಟ್ಟಾರೆಯಾಗಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿಯಿಂದ ಭ್ರಷ್ಟರು ಶಾಕ್ ಗೆ ಒಳಗಾಗಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!