ಬಳ್ಳಾರಿ:- ದಶಕಗಳಿಗೂ ಹಿಂದಿನ ಪ್ರಕರಣವಾಗಿರುವ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರದ ಪ್ರಕರಣದ ಬಗ್ಗೆ ವಿಡಿಯೋ ಮಾಡಿ ತಲ್ಲಣ ಸೃಷ್ಟಿಸಿರುವ ಯೂಟ್ಯೂಬರ್ ಸಮೀರ್ ಮೇಲೆ ಇದೀಗ FIR ದಾಖಲಾಗಿದೆ.
ಸೌಜನ್ಯ ಅವರ ರೇಪ್ ಅಂಡ್ ಮರ್ಡರ್ ಕೇಸ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ಎನ್ನುವವರು ಸುದೀರ್ಘ ವಿಡಿಯೋವೊಂದನ್ನು ಮಾಡಿದ್ದರು. ಇದೀಗ ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಠಾಣೆಯ ಪೊಲೀಸರು ಇದೀಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲೆ ಧಾರ್ಮಿಕ ಭಾವನೆ ಹೊಂದಿರುವ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿ ವೀಡಿಯೋ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಬುಧವಾರ ರಾತ್ರಿ ಸಮೀರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ -299 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.