ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂ. ಇತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿದ್ದು, ಕಳೆದ ಬಜೆಟ್ಗಿಂತ ಈ ಬಾರಿ 38,166 ಕೋಟಿ ಹೆಚ್ಚಳವಾಗಿದೆ.
Advertisement
ಇನ್ನೂ ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್‌ನನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ.
ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.