ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ಗುರುವಾರ ನಡೆದ WPL ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು ಸಿಕ್ಕಿದೆ.
ಮೊದಲು ಬ್ಯಾಟ್ ಮಾಡಿದ ವಾರಿಯರ್ಸ್, 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 150 ರನ್ ಪೇರಿಸಿತು. ಇದಕ್ಕುತ್ತರವಾಗಿ ಮುಂಬಯಿ, 9 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು. ಇದಕ್ಕೂ ಮೊದಲು ಆರಂಭಿಕರಾಗಿ ಕಣಕ್ಕಿಳಿದ ಗ್ರೇಸ್ ಹ್ಯಾರಿಸ್(28) ಮತ್ತು ಜಾರ್ಜಿಯಾ ಮೊದಲ ವಿಕೆಟ್‌ಗೆ 74 ರನ್ ಕೂಡಿಸಿ ಉತ್ತಮ ಅಡಿಪಾಯ ಹಾಕಿದರು. ಆದರೆ ನಾಯಕಿ ದೀಪ್ತಿ ಶರ್ಮ(27) ಹೊರತುಪಡಿಸಿ ಉಳಿದವರು ದಿಟ್ಟ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲರಾದರು. ಮುಂಬಯಿ ತಂಡದ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಬಲಗೈ ಲೆಗ್ ಸ್ಪಿನ್ನರ್ ಅಮೆಲಿಯಾ 5 ವಿಕೆಟ್ ಉರುಳಿಸಿ ಗಮನ ಸೆಳೆದರು.
ಇನ್ನೂ 4 ಜಯ ಸಾಧಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ 8 ಅಂಕ ಪಡೆಯುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಲ್ಲಿದ್ದರೆ, ಯುಪಿ ವಾರಿಯರ್ಸ್ 5 ಪಂದ್ಯ ಸೋಲುವ ಮೂಲಕ 4 ಅಂಕ ಸಂಪಾದಿಸಿ 5ನೇ ಸ್ಥಾನದಲ್ಲಿದೆ.



